
ಬಾಲಿವುಡ್ ಹಿರಿಯ ನಟ ದೇಬ್ ಮುಖರ್ಜಿ ನಿಧನರಾಗಿದ್ದಾರೆ. 83ನೇ ವರ್ಷದ ದೇಬ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ದೇಬ್ ಮುಖರ್ಜಿ ಬ್ರಹ್ಮಾಸ್ತ್ರ ಸಿನಿಮಾ ನಿರ್ದೇಶಕ ಅಯಾನ್ ಮುಖರ್ಜಿ ಅವರ ತಂದೆ. ದೇಬ್ ಮುಖರ್ಜಿ ಅಂತಿಮ ದರ್ಶನ ಪಡೆಯಲು ಅವರ ನಿವಾಸಕ್ಕೆ ಚಿತ್ರರಂಗದ ನಟ, ನಟಿಯರು ಆಗಮಿಸುತ್ತಿದ್ದಾರೆ. ಇಂದು ಸಂಜೆಯೇ ಮುಂಬೈನಲ್ಲಿ ನಟನ ಅಂತಿಮ ಸಂಸ್ಕಾರ ನಡೆಯಲಿದೆ. ದೇಬ್ ಮುಖರ್ಜಿ ನಟಿ ಕಾಜೋಲ್ ಅವರ ಚಿಕ್ಕಪ್ಪ.
ಅಭಿನೇತ್ರಿ, ಏಕ್ ಬಾರ್ ಮುಸ್ಕುರಾದೊ, ಆಸೂ ಬನ್ ಗಯೇ ಪೂಲ್ ಇನ್ನೂ ಕೆಲವು ಸಿನಿಮಾಗಳಲ್ಲಿ ದೇಬ್ ನಟಿಸಿದ್ದಾರೆ. 2009ರಲ್ಲಿ ಬಿಡುಗಡೆ ಆದ ಶಾಹಿದ್ ಕಪೂರ್ ನಟನೆಯ ‘ಕಮೀನೆ’ ಅವರ ಕೊನೆಯ ಸಿನಿಮಾ ಆಗಿತ್ತು. ಆ ನಂತರ ಸಿನಿಮಾರಂಗದಿಂದ ಅಂತರ ಕಾಯ್ದುಕೊಂಡರು.
ದೇಬ್ ಮುಖರ್ಜಿ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯಲ್ಲಿ ಅನೇಕ ಬಾಲಿವುಡ್ ತಾರೆಯರು ಭಾಗಿಯಾಗುವ ನಿರೀಕ್ಷೆ ಇದೆ.
Advertisement