ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ತಿಹಾರ್ ಜೈಲಿಗೆ ಶರಣು!

ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನಿಂದ ಯಾವುದೇ ರಿಲೀಫ್ ಸಿಗದ ಕಾರಣ ಬಾಲಿವುಡ್ ನಟ ರಾಜಪಾಲ್ ಯಾದವ್ ತಿಹಾರ್ ಜೈಲಿಗೆ ಶರಣಾಗಿದ್ದಾರೆ.
Rajpal Yadav
ನಟ ರಾಜಪಾಲ್ ಯಾದವ್ ಶರಣಾಗತಿ
Updated on

ಮುಂಬೈ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ನಟ ರಾಜಪಾಲ್ ಯಾದವ್ ತಿಹಾರ್ ಜೈಲಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನಿಂದ ಯಾವುದೇ ರಿಲೀಫ್ ಸಿಗದ ಕಾರಣ ಬಾಲಿವುಡ್ ನಟ ರಾಜಪಾಲ್ ಯಾದವ್ ತಿಹಾರ್ ಜೈಲಿಗೆ ಶರಣಾಗಿದ್ದಾರೆ. ಮುರಳಿ ಪ್ರಾಜೆಕ್ಟ್ಸ್ ಸಲ್ಲಿಸಿದ್ದ ದೂರಿನ ಪ್ರಕಾರ ನಟ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು.

ಪ್ರಕರಣದ ಇತಿಹಾಸವನ್ನು ಪರಿಗಣಿಸಿ, ನ್ಯಾಯಾಲಯವು ಮತ್ತಷ್ಟು ಅವಕಾಶ ನೀಡಲು ನಿರಾಕರಿಸಿದೆ. ಯಾವುದೇ ವ್ಯಕ್ತಿಯು ಹಿನ್ನೆಲೆಯ ಕಾರಣಕ್ಕೆ ವಿಶೇಷ ಪರಿಗಣನೆ ನಿರೀಕ್ಷಿಸಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ರಾಜ್ ಪಾಲ್ ಯಾದವ್ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದು, ಗುರುವಾರ (ಜನವರಿ 5) ನಾಲ್ಕು ಗಂಟೆಗೆ ಅವರು ಜೈಲಿಗೆ ಆಗಮಿಸಿದರು. ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ ಎಂದು ತಿಳಿದುಬಂದಿದೆ.

Rajpal Yadav
ಕೊಡಗು Hit and run case: ಪರಾರಿಯಾಗಿದ್ದ ಕಾರು ಚಾಲಕ ಪೊಲೀಸರ ವಶಕ್ಕೆ

ಏನಿದು ಪ್ರಕರಣ?

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್​​ಪಾಲ್ ವಿರುದ್ಧ ಕೇಸ್ ದಾಖಲಿಸಿತ್ತು. ನಟ ಹಾಗೂ ಅವನ ಪತ್ನಿ ಕೊಟ್ಟ ಚೆಕ್ ಬೌನ್ಸ್ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 2018ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್​ ಪಾಲ್ ಯಾದವ್ ಹಾಗೂ ಆತನ ಪತ್ನಿ ಅಪರಾಧಿ ಎಂದು ಘೋಷಣೆ ಮಾಡಿತ್ತು. 2019ರಲ್ಲಿ ಸೆಷನ್ ಕೋರ್ಟ್ ಈ ಆದೇಶವನ್ನು ಎತ್ತಿ ಹಿಡಿಯಿತು.

2019ರಲ್ಲಿ ಈ ಪ್ರಕರಣವನ್ನು ದೆಹಲಿ ಕೋರ್ಟ್​​ ಅಲ್ಲಿ ರಾಜ್​​ಪಾಲ್ ಯಾದವ್ ಪ್ರಶ್ನೆ ಮಾಡಿದರು. ಸೆಟಲ್​​ಮೆಂಟ್​ಗೆ ದಾರಿ ಹುಡುಕುತ್ತಿದ್ದೇವೆ ಎಂದು ಹೇಳಿದ ಕಾರಣದಿಂದ 2024ರಲ್ಲಿ ಹೈಕೋರ್ಟ್ ನಟನಿಗೆ ತಾತ್ಕಾಲಿಕ ರಿಲೀಫ್ ನೀಡಿತ್ತು. ಆದರೆ, ಈವರೆಗೆ ನಟ ಹಣವನ್ನು ಹಿಂದಿರುಗಿಸಿಲ್ಲ.

ಹೀಗಾಗಿ, ಕೋರ್ಟ್ ಈ ಬಗ್ಗೆ ಆದೇಶ ಹೊರಡಿಸಿದೆ. ಹೆಚ್ಚುವರಿಯಾಗಿ ಕೆಲ ವಾರ ಅವಕಾಶ ಕೊಟ್ಟರೆ ಹಣ ಹೊಂದಿಸಲು ಪ್ರಯತ್ನಿಸೋದಾಗಿ ರಾಜ್​​ಪಾಲ್ ಪರ ವಕೀಲರು ಹೇಳಿದ್ದರು. ಆದರೆ, ಇದಕ್ಕೆ ಹೈಕೋರ್ಟ್ ನಿರಾಕರಿಸಿತ್ತು. ಬುಧವಾರ ನಾಲ್ಕು ಗಂಟೆ ಒಳಗೆ ಸರೆಂಡರ್ ಆಗಲು ಕೋರ್ಟ್ ಸೂಚನೆ ನೀಡಿತ್ತು.

ಅಂತೆಯೇ ‘ಯಾವುದೇ ವ್ಯಕ್ತಿ ನಿರ್ದಿಷ್ಟ ಹಿನ್ನೆಲೆ ಅಥವಾ ಉದ್ಯಮಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ಈ ನ್ಯಾಯಾಲಯವು ಅವರಿಗೆ ವಿಶೇಷ ಅವಕಾಶ ನೀಡುತ್ತದೆ ಎಂದು ನಿರೀಕ್ಷಿಸಬೇಡಿ. ನಿರಂತರವಾಗಿ ಅದೇ ತಪ್ಪು ಆಗುತ್ತಿದ್ದರೆ ಅದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯ ಹೇಳಿತ್ತು. ದೂರುದಾರ ಕಂಪನಿಗೆ ಇತ್ಯರ್ಥ ಮೊತ್ತವನ್ನು ಪಾವತಿಸುವ ಕುರಿತು ಯಾದವ್ ನೀಡಿದ ಒಪ್ಪಂದಗಳನ್ನು ಪದೇ ಪದೇ ಉಲ್ಲಂಘಿಸಿದ ನಂತರ ನಿರ್ದೇಶನವು ಬಂದಿದೆ ಎಂದು ನ್ಯಾಯಾಲಯ ಗಮನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com