'ಪ್ರಮಾಣವಚನಕ್ಕೂ ಮುನ್ನ ದಳಪತಿ ವಿಜಯ್-ತ್ರಿಶಾ ಮದುವೆಯಾಗಬೇಕು': ರಾಖಿ ಸಾವಂತ್ ಶಾಕಿಂಗ್ ಹೇಳಿಕೆ

ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆಯುವ ಮೂಲಕ ತಮಿಳುನಾಡು ರಾಜಕೀಯ ಅಖಾಡದಲ್ಲಿ ಮಿಂಚುತ್ತಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳಿವೆ.
'I Think They Should Get Married': Rakhi Sawant REACTS To Thalapathy Vijay-Trisha Krishnan Link Up
ರಾಖಿ ಸಾವಂತ್ - ವಿಜಯ್-ತ್ರಿಶಾ
Updated on

ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರು ಸದ್ಯ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಸರ್ಕಸ್ ನಡೆಸುತ್ತಿದ್ದಾರೆ.

ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆಯುವ ಮೂಲಕ ತಮಿಳುನಾಡು ರಾಜಕೀಯ ಅಖಾಡದಲ್ಲಿ ಮಿಂಚುತ್ತಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳಿವೆ.

ಈ ವರ್ಷದ ಆರಂಭದಲ್ಲಿ ಚೆನ್ನೈನಲ್ಲಿ ನಡೆದ ನಿರ್ಮಾಪಕ ಕಲ್ಪತಿ ಎಸ್ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಮಗನ ವಿವಾಹ ಆರತಕ್ಷತೆಯಲ್ಲಿ ವಿಜಯ್ ಹಾಗೂ ತ್ರಿಶಾ ಕೃಷ್ಣನ್ ಒಟ್ಟಿಗೆ ಕಾಣಿಸಿಕೊಂಡ ನಂತರ ಅವರು ಸಂಬಂಧದ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿತ್ತು.

'I Think They Should Get Married': Rakhi Sawant REACTS To Thalapathy Vijay-Trisha Krishnan Link Up
Video: ತಮಿಳುನಾಡಿನಲ್ಲಿ TVK ಭರ್ಜರಿ ಗೆಲುವು; ವಿಜಯ್ ಸಂಪುಟದಲ್ಲಿ ಗೆಳತಿ, ನಟಿ ತ್ರಿಶಾ DCM?

ನಟಿ ರಾಖಿ ಸಾವಂತ್ ಅವರು ಈ ವದಂತಿಗಳಿಗೆ ಪ್ರತಿಕ್ರಿಯಿಸಿದ್ದು, ದಳಪತಿ ವಿಜಯ್ ಹಾಗೂ ನಟಿ ತ್ರಿಶಾ ಸಂಬಂಧದ ಬಗ್ಗೆ ತಮ್ಮ ಪ್ರಾಮಾಣಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಫಿಲ್ಮಿಮಂತ್ರ ಮೀಡಿಯಾದೊಂದಿಗೆ ಮಾತನಾಡಿದ ರಾಖಿ ಸಾವಂತ್ ಅವರು, ವಿಜಯ್ ಮತ್ತು ತ್ರಿಶಾ ಜೋಡಿ ಅದ್ಭುತವಾಗಿದೆ. ಅವರಿಬ್ಬರೂ ಈಗಲೇ(ಪ್ರಮಾಣವಚನಕ್ಕೂ ಮುನ್ನ) ಮದುವೆಯಾಗಬೇಕು. ಅವರ ಮೆಹಂದಿ ಕಾರ್ಯಕ್ರಮಕ್ಕೆ ನಾವೆಲ್ಲರೂ ಹೋಗೋಣ ಎಂದು ಹೇಳಿದ್ದಾರೆ.

ತ್ರಿಷಾ ಜೊತೆಗಿನ ಅವರ ಸ್ನೇಹದ ಬಗ್ಗೆ ಮಾತನಾಡಿದ ಅವರು, ನಾನು ಮತ್ತು ತ್ರಿಷಾ ಚಿತ್ರರಂಗದಲ್ಲಿ ಒಟ್ಟಿಗೆ ವೃತ್ತಿಜೀವನ ಆರಂಭಿಸಿದವರು, ಹಾಗಾಗಿ ಅವರು ನನಗೆ ಚೆನ್ನಾಗಿ ಗೊತ್ತು ಎಂದು ನಟಿ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com