

ಮುಂಬೈನ ಜುಹು ಕ್ಯಾಂಪಸ್ನಲ್ಲಿರುವ ಪುಷ್ಪಾ ಪಾರ್ಕ್ನಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಮತ್ತು ಅವರ ಚಾಲಕನ ಮೇಲೆ ಮೂವರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹಠಾತ್ ದಾಳಿಯಲ್ಲಿ ನಟ ಟೈಗರ್ ಶ್ರಾಫ್, ಅವರ ಚಾಲಕ ಮತ್ತು ರಿಕ್ಷಾ ಚಾಲಕ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಬಂದಿದೆ. ಮೂವರು ಅಪರಿಚಿತ ವ್ಯಕ್ತಿಗಳು ಟೈಗರ್ ಶ್ರಾಫ್ ಮೇಲೆ ಹಠಾತ್ತನೆ ಗುಂಡು ಹಾರಿಸಿದ್ದಾರೆ. ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪ್ರಸ್ತುತ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ನಟನ ಕಾರಿನತ್ತ ವ್ಯಕ್ತಿಯೊಬ್ಬ ಗುಂಡು ಹಾರಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಟ ಸುರಕ್ಷಿತವಾಗಿದ್ದು, ಈ ಘಟನೆಯಲ್ಲಿ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯ ಕುರಿತ ಹೆಚ್ಚಿನ ವಿವರಗಳು ಹಾಗೂ ಗಾಯಗೊಂಡವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಘಟನೆಯಲ್ಲಿ ಭಾಗಿಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಸುಳಿವುಗಳನ್ನು ಕಂಡುಕೊಳ್ಳಲು ವಿಶೇಷ ಪೊಲೀಸ್ ತಂಡಗಳು ಆ ಪ್ರದೇಶದ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.