"ಸದ್ಯಕ್ಕೆ ಮಾತನಾಡಲು ಸಾಧ್ಯವಿಲ್ಲ..." ಆರೋಗ್ಯದ ಬಗ್ಗೆ ಮಹತ್ವದ ಅಪ್‌ಡೇಟ್ ಹಂಚಿಕೊಂಡು ಕ್ಷಮೆಯಾಚಿಸಿದ ಅಮಿತಾಭ್ ಬಚ್ಚನ್..!

ವಿಶ್ರಾಂತಿ ಪಡೆದು ಚೇತರಿಸಿಕೊಳ್ಳಲು ಕೆಲವು ದಿನಗಳ ಕಾಲ ವಿರಾಮ ಪಡೆಯುವಂತೆ ವೈದ್ಯರು ಸಲಹೆ ನೀಡಿರುವುದರಿಂದ, ಸಾಮಾಜಿಕ ಜಾಲತಾಣಗಳಲ್ಲಿ ಎಂದಿನಂತೆ ಬರೆಯಲು ಸಾಧ್ಯವಾಗುತ್ತಿಲ್ಲ.
Amitabh Bachchan
ಅಮಿತಾಭ್ ಬಚ್ಚನ್
Updated on: 

ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು ತಮ್ಮ ಆರೋಗ್ಯದ ಕುರಿತು ಮಹತ್ವದ ಮಾಹಿತಿಯೊಂದನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ವೈದ್ಯರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ತಾವು ಕೆಲವು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿರುವುದಾಗಿ ಬಿಗ್ ಬಿ ತಿಳಿಸಿದ್ದಾರೆ.

ವಿಶ್ರಾಂತಿ ಪಡೆದು ಚೇತರಿಸಿಕೊಳ್ಳಲು ಕೆಲವು ದಿನಗಳ ಕಾಲ ವಿರಾಮ ಪಡೆಯುವಂತೆ ವೈದ್ಯರು ಸಲಹೆ ನೀಡಿರುವುದರಿಂದ, ಸಾಮಾಜಿಕ ಜಾಲತಾಣಗಳಲ್ಲಿ ಎಂದಿನಂತೆ ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ ನಿಯಮಿತವಾಗಿ ತಮ್ಮ ಬರಹಗಳನ್ನು ಓದುವ ಅಭಿಮಾನಿಗಳಿಗೆ ಕ್ಷಮೆಯನ್ನೂ ಕೋರಿದ್ದಾರೆ.

ಆದರೆ, ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚಿಸಲು ಕಾರಣವಾದ ಆರೋಗ್ಯ ಸಮಸ್ಯೆಯ ಬಗ್ಗೆ ಅವರು ಯಾವುದೇ ಮಾಹಿತಿ ನೀಡಿಲ್ಲ. ಹೀಗಾಗಿ, ಅಭಿಮಾನಿಗಳು ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಹಿಂದಿಯಲ್ಲಿ ಬರೆದಿರುವ ಅವರು, ಕ್ಷಮಿಸಿ, ನನ್ನನ್ನು ಕ್ಷಮಿಸಿ. ವಿಶ್ರಾಂತಿ ಪಡೆದು ಚೇತರಿಸಿಕೊಳ್ಳಲು ಕೆಲವು ದಿನಗಳ ವಿರಾಮ ತೆಗೆದುಕೊಳ್ಳುವಂತೆ ನನಗೆ ಸಲಹೆ ನೀಡಲಾಗಿದೆ. ಹೀಗಾಗಿ, ಸದ್ಯಕ್ಕೆ ಏನನ್ನೂ ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಇದಕ್ಕೂ ಒಂದು ದಿನ ಮೊದಲು ತಮ್ಮ ವೈಯಕ್ತಿಕ ಬ್ಲಾಗ್‌ನಲ್ಲಿಯೂ ಇದೇ ರೀತಿಯ ಸಂದೇಶವನ್ನು ಹಂಚಿಕೊಂಡಿದ್ದರು.

Amitabh Bachchan
KBCಗೆ ಅಮಿತಾಬ್ ಬಚ್ಚನ್ ವಿದಾಯ? ಈ ಬಗ್ಗೆ ಬಿಗ್ ಬಿ ಹೇಳಿದ್ದೇನು?

ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸುವುದರ ಜೊತೆಗೆ, ಸದ್ಯ ಚೇತರಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಕೆಲವು ದಿನಗಳ ಕಾಲ ಸಂವಹನದಿಂದ ದೂರವಿರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.

ಎಲ್ಲರಿಗೂ ಮೊದಲಿಗೆ ದಸರಾ ಹಬ್ಬದ ಶುಭಾಶಯಗಳು. ಪ್ರೀತಿ, ಸಂತೋಷ, ಸಂತೃಪ್ತಿ ಮತ್ತು ಪ್ರಾರ್ಥನೆಗಳು ನಿಮ್ಮದಾಗಲಿ. ಸದ್ಯ ಕಟ್ಟುನಿಟ್ಟಿನ ವಿಶ್ರಾಂತಿ ಮತ್ತು ಚೇತರಿಕೆಯಲ್ಲಿದ್ದೇನೆ. ಹಾಗಾಗಿ, ಸಂವಹನ ನಡೆಸಲು ಅನುಮತಿಯಿಲ್ಲ. ದಯವಿಟ್ಟು ಕ್ಷಮಿಸಿ ಎಂದು ಬರೆದುಕೊಂಡಿದ್ದರು.

ಆದರೆ, ಇದನ್ನೇ ನನ್ನ ಗೌರವಪೂರ್ವಕ ಪ್ರತಿಕ್ರಿಯೆ ಎಂದು ಪರಿಗಣಿಸಿ. ಸಾಧ್ಯವಾದರೆ, ಮುಂದಿನ ದಿನಗಳಲ್ಲಿ ಮತ್ತೆ ಬರೆಯುತ್ತೇನೆ ಎಂದೂ ತಿಳಿಸಿದ್ದಾರೆ.

ವೃತ್ತಿಜೀವನದ ವಿಚಾರಕ್ಕೆ ಬಂದರೆ, ಅಮಿತಾಭ್ ಬಚ್ಚನ್ ಸದ್ಯ ‘ಕೌನ್ ಬನೇಗಾ ಕರೋಡ್‌ಪತಿ’ ಕಾರ್ಯಕ್ರಮದ 18ನೇ ಆವೃತ್ತಿಯನ್ನು ನಿರೂಪಣೆ ಮಾಡುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ನಾಗ್ ಅಶ್ವಿನ್ ನಿರ್ದೇಶನದ ವೈಜ್ಞಾನಿಕ ಕಾಲ್ಪನಿಕ ಚಿತ್ರ ‘ಕಲ್ಕಿ 2898 ಎಡಿ’ಯ ಮುಂದುವರಿದ ಭಾಗದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್ ಮತ್ತು ಕಮಲ್ ಹಾಸನ್ ಕೂಡ ಈ ಚಿತ್ರದಲ್ಲಿ ನಟಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com