ಮೈಸೂರು ಡ್ರೀಮ್ ಮರ್ಚೆಂಟ್ಸ್ ಸಂಸ್ಥೆಯಲ್ಲಿ ನಿರ್ಮಾಣವಾಗುತ್ತಿರುವ ರೆಬಲ್ ಚಿತ್ರಕ್ಕೆ ಮಂಜರಿ ಸ್ಟುಡಿಯೋದಲ್ಲಿ ರೀರೆಕಾರ್ಡಿಂಗ್ ನಡೆಯುತ್ತಿದೆ. ಚಿತ್ರ ಆಗಸ್ಟ್ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಕರ್ನಾಟಕದ ಅನೇಕ ಸುಂದರ ತಾಣಗಳಲ್ಲಿ ಚಿತ್ರಕ್ಕೆ ಚಿತ್ರೀಕರಣ ನಡೆದಿದ್ದು,. ಸಿಂಗಾಪುರ್ನಲ್ಲೂ ನಲವತ್ತಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ನಡೆದಿರುವುದು ವಿಶೇಷ. ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದ ನಾಯಕರಾಗಿ ಆದಿತ್ಯ ಅಭಿನಯಿಸುತ್ತಿದ್ದಾರೆ. ಸಂಜನಾ, ದೀಪಿಕಾರಾವ್, ಶರತ್ ಲೋಹಿತಾಶ್ವಾ, ರಾಮಕೃಷ್ಣ, ಅವಿನಾಶ್, ಸುಹಾಸಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ನಿರ್ದೇಶಕರೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸೆಲ್ವರಾಜ್ ಛಾಯಾಗ್ರಹಣ, ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದಾರೆ. ಎಂ.ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ.