
ಬೆಂಗಳೂರು: ಮೋಹಕ ನಟಿ ಐಂದ್ರಿತಾ ರೈ ಕಾರು ಅಪಘಾತಕ್ಕೀಡಾಗಿ, ಸದ್ಯದಲ್ಲೇ ನಟಿ ಪಾರಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಶನಿವಾರ ಗುಜರಾತ್‌ಗೆ ಸ್ನೇಹಿತೆಯ ಮದುವೆಗೆ ತೆರಳಿದ್ದ ಸಂದರ್ಭದಲ್ಲಿ ಐಂದ್ರಿತಾ ರೈ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಐಂದ್ರಿತಾ ಭುಜಕ್ಕೆ ಗಾಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದ್ಯಕ್ಕೆ ಮುಂಬೈನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಐಂದ್ರಿತಾ, ಇನ್ನೆರಡು ದಿನಗಳಲ್ಲಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
Advertisement