ವಧು-ವರರ ಪೋಷಕರು, ಬಂಧುಗಳು, ಸ್ನೇಹಿತರು ಸೇರಿದಂತೆ ಅಪಾರ ಸಂಖ್ಯೆಯ ಶಿವಣ್ಣ ಅವರ ಅಭಿಮಾನಿಗಳು, ಹಿತೈಷಿಗಳು ಈ ಮದುವೆ ಕಾರ್ಯಕ್ರಮಕ್ಕೆ ಬರುವ ನಿರೀಕ್ಷೆಯಿದ್ದು, ಊಟೋಪಚಾರಕ್ಕೆ ಯಾವುದೇ ತೊಂದರೆಯಾಗದಂತೆ, ತ್ರಿಪುರವಾಸಿನಿಯಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ತ್ರಿಪುರ ವಾಸಿನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಹೆಬ್ಬಾಗಿಲುಗಳಲ್ಲಿ ವರನಟ ರಾಜ್ ಕುಮಾರ್ ಮತ್ತು ಎಸ್. ಬಂಗಾರಪ್ಪ ದಂಪತಿಯ ಬೃಹತ್ ಭಾವಚಿತ್ರಗಳನ್ನು ಹಾಕಲಾಗಿದೆ.