

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಅವರು ತೀವ್ರ ಅಸ್ವಸ್ಥರಾಗಿ, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರತರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಾಗಿಣಿಯನ್ನು ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ತಾಯಿ ರೋಹಿಣಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಫುಡ್ ಪಾಯ್ಸನ್‌ನಿಂದ ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದ್ದು, ಅಗತ್ಯ ಬಿದ್ದರೆ ಶಸ್ತ್ರಚಿಕಿತ್ಸೆ ಮಾಡಬೇಕಾಗುತ್ತದೆ ಎಂದು ವೈದ್ಯರು ತಿಳಿಸಿರುವುದಾಗಿ ರೋಹಿಣಿ ದ್ವಿವೇದಿ ಅವರು ಹೇಳಿದ್ದಾರೆ.