ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಮುನ್ನುಗುತ್ತಿದ್ದು, ಚಿತ್ರ ಬಿಡುಗಡೆಯಾದ ಮೊದಲ ದಿನವೇ 6 ಕೋಟಿ ಕೊಳ್ಳೆ ಹೊಡೆದಿದೆ ಎಂದು ಹೇಳಲಾಗಿದೆ.
ಸುಮಾರು 300 ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿರುವ ಮಾಸ್ಟರ್ ಪೀಸ್ ಭರ್ಜರಿ ಓಪನಿಂಗ್ ಪಡೆದುಕೊಂಡು ಬಾಕ್ಸ್ ಆಫೀಸ್ ನಲ್ಲಿ ಧೂಳಿಪಟ ಎಬ್ಬಿಸಿದ್ದು, ಮೊದಲ ದಿನವೇ ಗ್ರಾಸ್ ಕಲೆಕ್ಷನ್ 6 ಕೋಟಿ ಗಳಿಗೆ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸಂಭಾಷಣೆಕಾರ ಮಂಜು ಮಾಂಡವ್ಯ ನಿರ್ದೇಶನದ ಮೊದಲ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಸದ್ದು ಮಾಡುತ್ತಿದೆ. ನಿರೀಕ್ಷೆಯಂತೆ ಅಭಿಮಾನಿಗಳು ಚಿತ್ರ ವೀಕ್ಷಿಸಲು ಮುಗಿ ಬಿದ್ದಿದ್ದಾರೆ.