ಅಭಿನವ ಭಾರ್ಗವ ವಿಷ್ಣುವರ್ಧನ್ ಅವರ 6ನೇ ಪುಣ್ಯತಿಥಿ

ಸಾಹಸ ಸಿಂಹ, ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್ ಅವರು ನಮ್ಮನ್ನಗಲಿ ಇಂದಿಗೆ ಆರು ವರ್ಷ. ವಿಷ್ಣು ರ್ಧನ್ ಅವರ 6ನೆ ವರ್ಷದ ಪುಣ್ಯ ತಿಥಿ ....
ವಿಷ್ಣುವರ್ಧನ್ ಸಮಾಧಿ
ವಿಷ್ಣುವರ್ಧನ್ ಸಮಾಧಿ
Updated on: 

ಬೆಂಗಳೂರು: ಸಾಹಸ ಸಿಂಹ, ಅಭಿನಯ ಭಾರ್ಗವ ಡಾ. ವಿಷ್ಣುವರ್ಧನ್ ಅವರು ನಮ್ಮನ್ನಗಲಿ ಇಂದಿಗೆ ಆರು ವರ್ಷ. ವಿಷ್ಣು ವರ್ಧನ್ ಅವರ 6ನೆ ವರ್ಷದ ಪುಣ್ಯ ತಿಥಿ ಅಂಗವಾಗಿ ಇಂದು ನಗರದ ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ಅಭಿಮಾನಿಗಳ ದಂಡೇ ನೆರೆದಿತ್ತು.

ವಿಷ್ಣುವರ್ಧನ್ ಅಭಿಮಾನಿ ಸಂಘದ ಕಾರ್ಯಕರ್ತರು ರಕ್ತದಾನ, ಆರೋಗ್ಯತಪಾಸಣೆ ಶಿಬಿರ ನಡೆಸಿದರು. ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳಿಗಾಗಿ ಅನ್ನಸಂತರ್ಪಣೆ ನಡೆಯಿತು.

ಚೊಚ್ಚಲ ಚಿತ್ರ ನಾಗರಹಾವಿನ ಮೂಲಕ ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಂಡ ವಿಷ್ಣುವರ್ಧನ್ ಅವರು 200 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ಇನ್ನೂ ನಾಗರಹಾವು ಹೆಸರಿನಲ್ಲೇ ಇದೀಗ ಮತ್ತೊಂದು ಚಿತ್ರ ತೆರೆಗೆ ಬರಲು ಸಿದ್ಧತೆ ನಡೆದಿದ್ದು, ಈ ಚಿತ್ರದಲ್ಲಿ ವಿಷ್ಣುವರ್ಧನ್ ಅವರನ್ನು ಗ್ರಾಫಿಕ್ ತಂತ್ರಜ್ಞಾನದ ಮೂಲಕ ತೋರಿಸುತ್ತಿರುವುದು ಮತ್ತೊಂದು ವಿಶೇಷ. ಇಂದು ಅವರ ಸಮಾಧಿಯ ಬಳಿಯೇ ಚಿತ್ರದ ಮುಹೂರ್ತಕ್ಕೆ ಚಾಲನೆ ನೀಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com