ಕಾಸರವಳ್ಳಿ, ರಸೂಲ್ ಪೂಕುಟ್ಟಿ ಪ್ರತಿಭಟನೆ

ಪುಣೆಯಲ್ಲಿರುವ ಭಾರತೀಯ ಸಿನಿಮಾ ಮತ್ತು ಟಿವಿ ಸಂಸ್ಥೆಯ ಅಧ್ಯಕ್ಷರಾಗಿ ಚಿತ್ರ ನಟ ಮತ್ತು ಬಿಜೆಪಿ ನಾಯಕ ಗಜೇಂದ್ರ ಚೌಹಾಣ್‍ರನ್ನು ನೇಮಕ ಮಾಡಿದ್ದು ಈಗಾಗಲೇ ವಿವಾದಕ್ಕೆ ಕಾರಣವಾಗಿದೆ...
ಭಾರತೀಯ ಸಿನಿಮಾ ಮತ್ತು ಟಿವಿ ಸಂಸ್ಥೆ (ಸಂಗ್ರಹ ಚಿತ್ರ)
ಭಾರತೀಯ ಸಿನಿಮಾ ಮತ್ತು ಟಿವಿ ಸಂಸ್ಥೆ (ಸಂಗ್ರಹ ಚಿತ್ರ)

ನವದೆಹಲಿ: ಪುಣೆಯಲ್ಲಿರುವ ಭಾರತೀಯ ಸಿನಿಮಾ ಮತ್ತು ಟಿವಿ ಸಂಸ್ಥೆಯ ಅಧ್ಯಕ್ಷರಾಗಿ ಚಿತ್ರ ನಟ ಮತ್ತು ಬಿಜೆಪಿ ನಾಯಕ ಗಜೇಂದ್ರ ಚೌಹಾಣ್‍ರನ್ನು ನೇಮಕ ಮಾಡಿದ್ದು ಈಗಾಗಲೇ ವಿವಾದಕ್ಕೆ ಕಾರಣವಾಗಿದೆ.

ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು ಕನ್ನಡ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಆಸ್ಕರ್ ಪ್ರಶಸ್ತಿ ವಿಜೇತ ರಸೂಲ್ ಪೂಕುಟ್ಟಿ ಸೇರಿದಂತೆ ಹಳೇ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ಜತೆಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ ಹಳೆ ವಿದ್ಯಾರ್ಥಿಗಳ ನಿಯೋಗ ಮಾಡಿ ಚೌಹಾಣ್ ರನ್ನು ಹುದ್ದೆಯಿಂದ ವಜಾ  ಮಾಡಬೇಕು ಎಂದು ಆಗ್ರಹಿಸಿದರು. ಸುಮಾರು 2 ಗಂಟೆಗಳ ಕಾಲ ಜೇಟ್ಲಿ ಜತೆ ಮಾತುಕತೆ ನಡೆಸಿದರು. ಆದರೆ ಅದು ಅಪೂರ್ಣವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಇದೇ ವೇಳೆ ಪ್ರತಿಭಟನಾ ನಿರತರ ವಿರುದ್ಧ ಪೊಲೀಸರು ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com