ನಿರ್ಮಾಣ, ಪರಭಾಷಾ ಚಿತ್ರಕ್ಕೆ ನೂತನ ನೀತಿ ಅಗತ್ಯ: ರಾಜೇಂದ್ರ ಸಿಂಗ್ ಬಾಬು

ಚಿತ್ರ ನಿರ್ಮಾಣ ಹಾಗೂ ಪರಭಾಷಾ ಚಿತ್ರಗಳಿಗೆ ಸಂಬಂಧಿಸಿದಂತೆ ಸರ್ಕಾರ ನೂತನ ನೀತಿಯೊಂದನ್ನು ತರಬೇಕಾದ ಅಗತ್ಯವಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ಅಭಿಪ್ರಾಯಪಟ್ಟಿದ್ದಾರೆ...
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು

ಬೆಂಗಳೂರು: ಚಿತ್ರ ನಿರ್ಮಾಣ ಹಾಗೂ ಪರಭಾಷಾ ಚಿತ್ರಗಳಿಗೆ ಸಂಬಂಧಿಸಿದಂತೆ ಸರ್ಕಾರ ನೂತನ ನೀತಿಯೊಂದನ್ನು ತರಬೇಕಾದ ಅಗತ್ಯವಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಕರ್ನಾಟಕ ಚಲಚಿತ್ರ ಅಕಾಡೆಮಿ ಹಮ್ಮಿಕೊಂಡಿದ್ದ ಬೆಳ್ಳಿ ಸಿನೆಮಾ-ಬೆಳ್ಳಿ ಮಾತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಚಲನಚಿತ್ರ ಕ್ಷೇತ್ರದಲ್ಲಿ ರಾಜ್ಯ ಇನ್ನಷ್ಟು ಬೆಳೆಯುವ ಅಗತ್ಯವಿದೆ. ಸರ್ಕಾರದಿಂದ ಇನ್ನೂ ಹೆಚ್ಚಿನ ಪ್ರೊತ್ಸಾಹ ನೀಡಬೇಕಿದೆ. ಕನ್ನಡ ಚಿತ್ರಗಳಿಗೆ ಸರ್ಕಾರದಿಂದ ನೀಡಲಾಗುವ ಪ್ರೋತ್ಸಾಹ ಧನವನ್ನು ತ್ವರಿತಗತಿಯಲ್ಲಿ ತಲುಪಿಸುವ ವ್ಯವಸ್ಥೆ ಮಾಡಬೇಕಾಗಿದೆ. ಇಲ್ಲದಿದ್ದರೆ ನಿರ್ಮಾಪಕರು ಅನೇಕ ಸಮಸ್ಯೆಗಳಿಗೆ ಈಡಾಗುತ್ತಾರೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ ನಂದಕುಮಾರ್, ಸರ್ಕಾರ ಈಗಾಗಲೇ ಕನ್ನಡ ಚಲನಚಿತ್ರಗಳ ಅಭಿವೃದ್ಧಿಗೆ ಅಗತ್ಯ ಕ್ರಮಕೈಗೊಳ್ಳುತ್ತಿದ್ದು, ಇತ್ತೀಚಿಗಷ್ಟೇ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ. ಕನ್ನಡ ಚಿತ್ರರಂಗದ ಬೆಳವಣಿಗೆಗೆ ಅಗತ್ಯವಿರುವ ಎಲ್ಲ ಕಾರ್ಯಗಳಿಗೆ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಸಭಾ ಕಾರ್ಯಕ್ರಮದ ಬಳಿಕ 2014ನೇ ಸಾಲಿನ ರಾಷ್ಟ್ರಪ್ರಶಸ್ತಿ ವಿಜೇತ ಹರಿವು ಚಿತ್ರ ಪ್ರದರ್ಶನ ಗೊಂಡಿತು. ಬಳಿಕ ಹರಿವು ಚಿತ್ರ ನಿರ್ದೇಶಕ ಎಂ.ಮಂಜು ನಾಥ ಸೋಮಕೇಶವ ರೆಡ್ಡಿ (ಮಂಸೋರೆ) ಅವರೊಂದಿಗೆ ಸಂವಾದ ನಡೆಯಿತು. ಕರ್ನಾಟಕ ಚಲಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಥಾಮಸ್ ಡಿಸೋಜಾ, ಚಿತ್ರ ನಿರ್ದೇಶಕ ಪಿ. ಶೇಷಾದ್ರಿ, ಟಿ.ಎಸ್.ನಾಗಾಭರಣ, ಅಕಾಡೆಮಿ ರಿಜಿ ಸ್ಟ್ರಾರ್ ಎಚ್.ಬಿ. ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com