
ಬೆಂಗಳೂರು: ಕನ್ನಡದ ಮೇರು ನಟ ಡಾ.ವಿಷ್ಟುವರ್ಧನ್ ಅವರ ಸಮಾಧಿ ವಿವಾದ ಕೊನೆಗೂ ಬಗೆಹರಿದಿದ್ದು, ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲೇ ಸಾಹಸ ಸಿಂಹನ ಸ್ಮಾರಕ ನಿರ್ಮಾಣವಾಗಲಿದೆ.
ವಿಷ್ಣು ಸ್ಮಾರಕಕ್ಕಾಗಿ 2 ಎಕರೆ ಜಮೀನು ನೀಡಲು ಅಭಿಮಾನ್ ಸ್ಟುಡಿಯೋ ಮಾಲೀಕರು ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಅವರು ಇಂದು ಜಿಲ್ಲಾಧಿಕಾರಿಗೆ ಲಿಖಿತ ಸಮ್ಮತಿ ಪತ್ರ ನೀಡಿದ್ದಾರೆ.
ಭಾರತಿ ವಿಷ್ಣುವರ್ಧನ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಂಕರ್ ಸಮ್ಮುಖದಲ್ಲಿ ಅಭಿಮಾನ್ ಸ್ಟುಡಿಯೋ ಮಾಲೀಕರು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದರು.
ವಿಷ್ಣುವರ್ಧನ್ ಅವರ ಸ್ಮರಣಾರ್ಥ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ನಗರದ ಉತ್ತರಹಳ್ಳಿ ಬಳಿಯ ಅಭಿಮಾನ್ ಸ್ಟುಡಿಯೋದಲ್ಲಿ ಎರಡು ಎಕರೆ ಜಮೀನು ಮಂಜೂರು ಮಾಡಿತ್ತು. ಆದರೆ ಸ್ಟುಡಿಯೋ ಮಾಲೀಕರು ತಕರಾರು ತೆಗೆದ ಹಿನ್ನೆಲೆಯಲ್ಲಿ ಸರ್ಕಾರ ಮೈಲಸಂದ್ರದ ಬಳಿ ಎರಡು ಎಕರೆ ಭೂಮಿ ಮಂಜೂರು ಮಾಡಿತ್ತು. ಈ ಜಮೀನು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಬಫರ್ ವಲಯದ ವ್ಯಾಪ್ತಿಗೆ ಸೇರುತ್ತದೆ ಎಂದು ಹೈಕೋರ್ಟ್ ಇದನ್ನೂ ಸಹ ರದ್ದುಗೊಳಿಸಿತ್ತು.
Advertisement