ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪುತ್ರ ಹಾಗೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮೊಮ್ಮಗ ನಿಖಿಲ್ ಗೌಡ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿರೋದು ಹಳೇ ಸುದ್ದಿ. ಹೊಸ ವಿಷಯ ಏನಪ್ಪಾ ಅಂದರೆ ನಿಖಿಲ್ ಗೌಡ ಅಭಿನಯಿಸುತ್ತಿರುವ ಚಿತ್ರದ ಹೆಸರು ಜಾಗ್ವಾರ್.
ಪುರಿ ಜಗನ್ನಾಥ್ ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ಜಾಗ್ವಾರ್ ಎಂದು ಶೀರ್ಷಿಕೆ ಇಡಲಾಗಿದೆ,ಈ ಮೆಗಾ ಸಿನಿಮಾ ಮೂರು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಏಕಕಾಲದಲ್ಲಿ ನಿಖಿಲ್ ಗೌಡ ಕನ್ನಡ ತಮಿಳು ಹಾಗೂ ತೆಲುಗು ಇಂಡಸ್ಟ್ರಿಗೆ ಪಾದಾರ್ಪಣೆ ಮಾಡಲಿದ್ದಾರೆ. ಅದ್ದೂರಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ.
Advertisement