
ಬೆಂಗಳೂರು: ಖ್ಯಾತ ನಟ, ವಸತಿ ಸಚಿವ ಅಂಬರೀಶ್ ಇಂದು ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಆದರೆ ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶೀಘ್ರದಲ್ಲೇ ಅವರು ಮನೆಗೆ ತೆರಳಲಿದ್ದಾರೆ ಎಂದು ಕೂಡ ಮೂಲಗಳು ತಿಳಿಸಿವೆ.
ಇತ್ತೀಚೆಗೆ ವಾಣಿಜ್ಯ ಮಂಡಳಿಯಲ್ಲಿ ನಿರ್ಮಾಪಕರ ಧರಣಿಯನ್ನು ಅಂಬರೀಶ್ ಅವರು ಬಗೆಹರಿಸಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ 'ಭಿಕ್ಷುಕರಿಗೆ ಆಯ್ಕೆಯಿಲ್ಲ' ಎಂದು ವರದಿಗಾರರಿಗೆ ನೀಡಿದ್ದ ಹೇಳಿಕೆ ಭಾರಿ ವಿವಾದವನ್ನು ಸೃಷ್ಟಿಸಿ, ಹೇಳಿಕೆಯನ್ನು ಹಿಂಪಡೆದು ಕ್ಷಮೆ ಯಾಚಿಸಬೇಕು ಎಂದು ನಿರ್ಮಾಪಕರು ನಿನ್ನೆ ಪಟ್ಟು ಹಿಡಿದಿದ್ದರು.
ಕಳೆದ ವರ್ಷದ ಫೆಬ್ರವರಿಯಲ್ಲಿ ಅಂಬರೀಶ್ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಅವರ ಅಪಾರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ ಸಚಿವರು ಸಂಪೂರ್ಣ ಗುಣಮುಖರಾಗಿ ಹೊರಬಂದಿದ್ದರು.
Advertisement