ಪೂನಂ ವಿರುದ್ಧದ ವಿಚಾರಣೆ ರದ್ದು

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಹೊತ್ತಿದ್ದ ರೂಪದರ್ಶಿ ಪೂನಂಪಾಂಡೆಗೆ ವಿರುದಟಛಿ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದಾಖಲಾಗಿದ್ದ ಖಾಸಗಿ ದೂರು ಮತ್ತು ಅದರ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ...
ರೂಪದರ್ಶಿ ಪೂನಂಪಾಂಡೆ
ರೂಪದರ್ಶಿ ಪೂನಂಪಾಂಡೆ

ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಹೊತ್ತಿದ್ದ ರೂಪದರ್ಶಿ ಪೂನಂಪಾಂಡೆಗೆ ವಿರುದ್ಧ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದಾಖಲಾಗಿದ್ದ ಖಾಸಗಿ ದೂರು ಮತ್ತು ಅದರ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಪೂನಂ ಪಾಂಡೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ಆರೋಪಿಸಿ ವಕೀಲ ಉಮೇಶ್ 2012ರಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಅದನ್ನಾಧರಿಸಿ ಮುಂಬೈ ಪೊಲೀಸರ ಮೂಲಕ ಪೂನಂ ಪಾಂಡೆಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಪಾಂಡೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಮಂಗಳವಾರ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ ನ್ಯಾ.ಎ.ಎನ್.ವೇಣುಗೋಪಾಲ ಗೌಡ ಅವರಿದ್ದ ಏಕ ಸದಸ್ಯ ಪೀಠ, ರೂಪದರ್ಶಿ ಪೂನಂಪಾಂಡೆ ಅವರೇ ಬೆತ್ತಲೆಯಾಗಿ ಫೋಟೋಹಿಡಿರುವ ಬಗ್ಗೆ ಸೂಕ್ತ ಸಾಕ್ಷಾಧಾರಗಳಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಪೂನಂಪಾಂಡೆ ವಿರುದ್ಧ ಖಾಸಗಿ ದೂರು, ವಿಚಾರಣೆ ಮತ್ತು ಅವರ ವಿರುದ್ಧ ಅಧೀನ ನ್ಯಾಯಾಲಯ ಜಾರಿ ಮಾಡಿದ್ದ ಜಾಮೀನು ರಹಿತ ಬಂಧನ ವಾರೆಂಟ್ ರದ್ದುಗೊಳಿಸಿ ಆದೇಶಿಸಿದೆ.

ವಿವಾದವೇನು?

2011ರ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪೂನಂಪಾಂಡೆ ಅರೆಬೆತ್ತಲಾಗಿ ವಿಷ್ಣು ದೇವರೊಂದಿಗೆ ನಿಂತು ಅಶ್ಲೀಲವಾಗಿ ಭಂಗಿ ತೋರಿಸಿದ್ದರು. ಇದು ಪ್ರತಿಕೆಗಳಲ್ಲಿ ಪ್ರಕಟಗೊಂಡಿತ್ತು. ಬಿಬಿಎಂಪಿ ಚುನಾವಣೆ ಪಾಲಿಕೆ, ಸರ್ಕಾರಕ್ಕೆ ನೋಟಿಸ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಆರಂಭವಾಗಿಲ್ಲ ಎಂದು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ರಾಜ್ಯ ಚುನಾವಣಾಧಿಕಾರಿ, ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.

ಸದ್ಯ ಪಾಲಿಕೆ ಸದಸ್ಯರಾಗಿ ಆಯ್ಕೆ ಆಗಿರುವ ಚುನಾಯಿತ ಜನ ಪ್ರತಿನಿಧಿಗಳ ಅವಧಿ ಏ.22ರಂದು ಮುಕ್ತಾಯಗೊಳ್ಳಲಿದೆ. ಆದರೆ, ಸರ್ಕಾರ ಈ ವರೆಗೂ ಚುನಾವಣೆ ಪ್ರಕ್ರಿಯೆ ಆರಂಭಿಸಿಲ್ಲ ಎಂದು ಪ್ರಶ್ನಿಸಿ ಪಾಲಿಕೆ ಸದಸ್ಯ ಸಿ.ಕೆ.ರಾಮಮೂರ್ತಿ ಹೈಕೋರ್ಟ್‍ನಲ್ಲಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ಪೀಠ, ನಿಗದಿತ ಸಮಯದಲ್ಲಿ ಚುನಾವಣೆ ನಡೆಸಬೇಕೆಂಬ ಕನಿಷ್ಠ ಅರಿವೂ ಸರ್ಕಾರಕ್ಕೆ ಇಲ್ಲವೇ? ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲು ನಿಗದಿಪಡಿಸಲು ಸರ್ಕಾರಕ್ಕೆ ಇನ್ನೆಷ್ಟು ಕಾಲಾವಕಾಶಬೇಕು ಎಂದು ಪೀಠ ಪ್ರಶ್ನಿಸಿದೆ. ಮುಂದಿನ ವಿಚಾರಣೆ ವೇಳೆ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರ ಯಾವ ಕ್ರಮ ತೆಗೆದು ಕೊಂಡಿದೆ ಎಂಬುದನ್ನು ಪೀಠಕ್ಕೆ ತಿಳಿಸುವಂತೆ ಸೂಚಿಸಿ ವಿಚಾರಣೆ 16ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com