ಬಿಗ್ ಬಾಸ್-3 ಮನೆಗೆ ಚಂದನ್ ಎಂಟ್ರಿ?

ತಮ್ಮ ಸಿಕ್ಸ್ ಪ್ಯಾಕ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಸುದ್ದಿ ಮಾಡುತ್ತಿರುವ, ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಲವ್ ಯು ಆಲಿಯಾ' ಚಿತ್ರದ ನಾಯಕ ಚಂದನ್...
ಚಂದನ್
ಚಂದನ್

ತಮ್ಮ ಸಿಕ್ಸ್  ಪ್ಯಾಕ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಸುದ್ದಿ ಮಾಡುತ್ತಿರುವ, ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಲವ್ ಯು ಆಲಿಯಾ' ಚಿತ್ರದ ನಾಯಕ ಚಂದನ್ ಅವರು ಈಗ ಬಿಗ್ ಬಾಸ್ ಮನೆಯಲ್ಲಿ ಬಾಡಿ ಪ್ರದರ್ಶಿಸಲು ಮುಂದಾಗಿದ್ದಾರೆ.

ಹೌದು, ಮೂಲಗಳ ಪ್ರಕಾರ ಕಿರುತೆರೆಯಿಂದ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಚಂದನ್ ಅವರಿಗೆ ಸುದೀಪ್ ಅವರ ಬಿಗ್ ಬಾಸ್ ಸೀಸನ್ 3ಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ. ಆದರೆ ಈ ಬಗ್ಗೆ ಕಾರ್ಯಕ್ರಮ ಪ್ರಸಾರ ಮಾಡುವ ಮಾಧ್ಯಮ ಅಥವಾ ನಟ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

'ಲವ್ ಯು ಆಲಿಯಾ' ಈ ವಾರ ಬಿಡುಗಡೆಗೆ ಸಿದ್ಧವಾಗಿದ್ದು, ಚಂದನ್ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದಾರೆ.

ಲಕ್ಷ್ಮೀ ಬಾರಮ್ಮ ಧಾರವಾಹಿಯ ಮೂಲಕ ಖ್ಯಾತಿ ಗಳಿಸಿದ್ದ ಚಂದನ್ ಸದ್ಯ ಗಾಂಧಿನಗರದಲ್ಲಿ ಗಟ್ಟಿ ನೆಲೆ ಕಂಡುಕೊಳ್ಳುವ ಯತ್ನದಲ್ಲಿದ್ದಾರೆ. ಚಂದನ್ ಅಭಿನಯದ ಕಟ್ಟೆ ಮತ್ತು ಎರಡೊಂದ್ಲೆ ಮೂರು ಚಿತ್ರಗಳು ಅಷ್ಟಾಗಿ ಹೆಸರು ತಂದುಕೊಡಲಿಲ್ಲ. ಆದರೆ ರವಿಚಂದ್ರನ್, ಭೂಮಿಕಾ ಚಾವ್ಲಾ ಹಾಗೂ ಸುದೀಪ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಲವ್ ಯು ಆಲಿಯಾ ಚಿತ್ರದ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಅಲ್ಲದೆ ಚಿತ್ರದಲ್ಲಿ ನೀಲಿ ತಾರೆ ಸನ್ನಿ ಲಿಯೋನ್ ಹಾಗೂ ಸೃಜನ್ ಲೋಕೇಶ್ ಸಹ ಇದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com