

ಬೆಂಗಳೂರು: 'ಸಿಂಪಲಾಗ್ ಒಂದ್ ಲವ್ ಸ್ಟೋರಿ', ಉಳಿದವರು ಕಂಡಂತೆ' ಚಿತ್ರಗಳಿಗೆ ಸಹ ನಿರ್ಮಾಪಕರಾಗಿದ್ದ ಅಭಿಜಿತ್ ಪಾಟೀಲ್ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
38 ವರ್ಷದ ಅಭಿಜಿತ್ ಪಟೇಲ್ ಪೀಣ್ಯದ ಕೈಗಾರಿಕಾ ವಸಾಹತು ಪ್ರದೇಶದಲ್ಲಿದ್ದ ಶೆಡ್ ನಲ್ಲಿ ನೇಣು ಹಾಕಿಕೊಂಡಿದ್ದರೆಂದು ಹೇಳಲಾಗಿದ್ದು, ಅವರು ಎಷ್ಟು ಹೊತ್ತಾದರೂ ಹೊರಗೆ ಬಾರದ ಕಾರಣ ಪರಿಶೀಲಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.
ಕಿರ್ಲೋಸ್ಕರ್ ಲೇಔಟ್ ನಲ್ಲಿ ಅಭಿಜಿತ್ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರೆಂದು ತಿಳಿದುಬಂದಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ತಿಳಿದುಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೀಣ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.