ಪ್ರತ್ಯೂಷ ಆತ್ಮಹತ್ಯೆ ಪ್ರಕರಣ: ಏ.18ರವರೆಗೆ ರಾಹುಲ್'ಗೆ ನಿರಾಳ

ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ನಟ ರಾಹುಲ್ ಗೆ ಮುಂಬೈ ಹೈ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ...
ನಟಿ ಪ್ರತ್ಯೂಷ ಹಾಗೂ ಗೆಳೆಯ ರಾಹುಲ್ ರಾಜ್ ಸಿಂಗ್
ನಟಿ ಪ್ರತ್ಯೂಷ ಹಾಗೂ ಗೆಳೆಯ ರಾಹುಲ್ ರಾಜ್ ಸಿಂಗ್

ನವದೆಹಲಿ: ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ನಟ ರಾಹುಲ್ ಗೆ ಮುಂಬೈ ಹೈ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ.

ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಗೆಳೆಯ ರಾಹುಲ್ ರಾಜ್ ಸಿಂಗ್ ವಿರುದ್ಧ ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಹೀಗಾಗಿ ಏಪ್ರಿಲ್ 3 ರಂದು ರಾಹುಲ್ ನನ್ನು ಮುಂಬೈ ಪೊಲೀಸರು ಬಂಧನಕ್ಕೊಳಪಡಿಸಿದ್ದರು. ನಂತರ ನಿರೀಕ್ಷಣಾ ಜಾಮೀನು ಕೋರಿ ರಾಹುಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಪ್ರಕರಣ ಸಂಬಂಧ ಮತ್ತಷ್ಟು ವಿಚಾರಣೆಯ ಅಗತ್ಯವಿದೆ ಎಂದು ಹೇಳಿದ್ದ ನ್ಯಾಯಾಲಯವು ಏಪ್ರಿಲ್ 7 ರಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ರಾಹುಲ್ ಮುಂಬೈ ಹೈ ಕೋರ್ಟ್ ಮೆಟ್ಟಿಲೇರಿದ್ದರು.

ಇದರಂತೆ ನಿನ್ನೆ ನಡೆದ ವಿಚಾರಣೆ ವೇಳೆ ರಾಹುಲ್ ವಿರುದ್ಧ ಪಬ್ಲಿಕ್ ಪ್ರಾಸಿಕ್ಯೂಟರ್ ಉಷಾ ಕೇಜ್ರಿವಾಲ್ ಅವರು ವಾದ ಮಂಡಿಸಿದ್ದರು. ಪ್ರತ್ಯೂಷ ಆತ್ಮಹತ್ಯೆ ಮಾಡಿಕೊಂಡ ಬಳಿಕ ರಾಹುಲ್ ಕಣ್ಮರೆಯಾಗಿದ್ದರು. ನಂತರ ಪೊಲೀಸರ ಕ್ರಮದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಮತ್ತೆ ಆಸ್ಪತ್ರೆಯಲ್ಲಿ ಪ್ರತ್ಯಕ್ಷರಾಗಿದ್ದರು ಎಂದು ಹೇಳಿದ್ದರು. ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯವು ನಂತರ ರಾಹುಲ್ ಗೆ ಏ.18ರವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com