

ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ನಿಶ್ಚಿತಾರ್ಥ ಇಂದು ಗೋವಾದಲ್ಲಿ ನಡೆಯಲಿದ್ದು, ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಚಿತ್ರರಂಗದ ಗಣ್ಯರು ಸಾಕ್ಷಿಯಾಗಲಿದ್ದಾರೆ.
ಯಶ್ ಮತ್ತು ರಾಧಿಕಾ ಪಂಡಿತ್ ನಿಶ್ಚಿತಾರ್ಥಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಅಂಬರೀಶ್, ಕ್ರೇಜಿಸ್ಟಾರ್ ರವಿಚಂದ್ರನ್ ಸೇರಿದಂತೆ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆ.
ವರಲಕ್ಷ್ಮೀ ಹಬ್ಬದ ದಿನ ಯಶ್ ಮತ್ತು ರಾಧಿಕಾ ಪಂಡಿತ್ ನಿಶ್ಚಿತಾರ್ಥ ನೆರವೇರಿಕೊಳ್ಳುತ್ತಿದ್ದು, ಬೆಳಗ್ಗೆ 9.30ರಿಂದ ಸಮಾರಂಭ ಪ್ರಾರಂಭವಾಗಲಿದೆ.
ಗೋವಾದಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆಯಲಿದ್ದು 4 ಲಕ್ಷ ರುಪಾಯಿ ವೆಚ್ಚದಲ್ಲಿ ವೇದಿಕೆಗೆ ಹೂವಿನ ಅಲಂಕಾರ ಮಾಡಲಾಗಿದೆ. ಇನ್ನು ಸಮಾರಂಭದಲ್ಲಿ ಗಣ್ಯರನ್ನು ಹೊರತು ಯಾರಿಗೂ ಪ್ರವೇಶ ನೀಡಲಾಗಿಲ್ಲ. ಇದೊಂದು ಖಾಸಗಿ ಕಾರ್ಯಕ್ರಮವಾಗಿದ್ದು, ಎರಡು ಮೂರು ದಿನಗಳಲ್ಲಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ನಿಶ್ಚಿತಾರ್ಥದ ಚಿತ್ರಿಕೆಯನ್ನು ನೀಡಲಾಗುವುದು ಎಂದು ನಿರ್ಮಾಪಕ ಕೆ.ಮಂಜು ಅವರು ತಿಳಿಸಿದ್ದಾರೆ.