ದೊಡ್ಮನೆ ಹುಡುಗ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಮಾಡಿದ ಶಿವಕುಮಾರ ಸ್ವಾಮೀಜಿ

ಪುನೀತ್ ರಾಜ್ ಕುಮಾರ್ ಅಭಿನಯದ ದೊಡ್ಮನೆ ಹುಡುಗ ಚಿತ್ರದ ಧ್ವನಿಸುರುಳಿಯನ್ನು ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಯವರು ಬಿಡುಗಡೆ ಮಾಡಿದರು...
ದೊಡ್ಮನೆ ಹುಡುಗ
ದೊಡ್ಮನೆ ಹುಡುಗ
Updated on

ತುಮಕೂರು: ಪುನೀತ್ ರಾಜ್ ಕುಮಾರ್ ಅಭಿನಯದ ದೊಡ್ಮನೆ ಹುಡುಗ ಚಿತ್ರದ ಧ್ವನಿಸುರುಳಿಯನ್ನು ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಯವರು ಬಿಡುಗಡೆ ಮಾಡಿದರು.

ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಹಾಕಲಾಗಿದ್ದ ಅದ್ದೂರಿ ವೇದಿಕೆಯಲ್ಲಿ ಧ್ವನಿ ಸುರುಳಿಯನ್ನು ಬಿಡುಗಡೆ ಮಾಡಲಾಯಿತು. ಈ ಸಮಾರಂಭಕ್ಕೆ ರೆಬಲ್ ಸ್ಟಾರ್ ಅಂಬರೀಶ್, ಯೋಗರಾಜ್ ಭಟ್, ದುನಿಯಾ ಸೂರಿ, ಪುನೀತ್ ರಾಜ್ ಕುಮಾರ್ ದಂಪತಿಗಳು ಹಾಜರಿದ್ದರು.

ದೊಡ್ಮನೆ ಹುಡುಗ ಚಿತ್ರವನ್ನು ಸೂರಿ ನಿರ್ದೇಶನ ಮಾಡಿದ್ದಾರೆ. ಎಂ ಗೋವಿಂದು ನಿರ್ಮಿಸಿರುವ ಚಿತ್ರದಲ್ಲಿ ಪುನೀತ್ ಗೆ ನಾಯಕಿಯಾಗಿ ರಾಧಿಕಾ ಪಂಡಿತ್ ನಟಿಸಿದ್ದಾರೆ. ಚಿತ್ರದಲ್ಲಿ ಅಂಬರೀಶ್, ಸುಮಲತಾ, ಭಾರತಿ ವಿಷ್ಣುವರ್ಧನ್, ರವಿಶಂಕರ್ ಸೇರಿದಂತೆ ಬಹುತಾರಾಗಣವನ್ನು ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com