ಪುನೀತ್, ರಾಧಿಕಾ ನಟನೆಯ ದೊಡ್ಮನೆ ಹುಡ್ಗ ಚಿತ್ರದ ಹಾಡು ಬಿಡುಗಡೆ ಮಾಡಿದ ಯಶ್

ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಹಾಗೂ ರಾಧಿಕ ಪಂಡಿತ್ ಅಭಿನಯದ ದೊಡ್ಮನೆ ಹುಡ್ಗ ಚಿತ್ರ ಒಂದಿಲ್ಲೊಂದು ವಿಶೇಷತೆಗಳಿಂದ ಹೆಸರು ಮಾಡುತ್ತಿದೆ.
ದೊಡ್ಮನೆ ಹುಡ್ಗ
ದೊಡ್ಮನೆ ಹುಡ್ಗ

ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ದೊಡ್ಮನೆ ಹುಡ್ಗ ಚಿತ್ರ ಒಂದಿಲ್ಲೊಂದು ವಿಶೇಷತೆಗಳಿಂದ ಹೆಸರು ಮಾಡುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಚಿತ್ರದ ಹಾಡೊಂದನ್ನು ನಟ ಸುದೀಪ್ ಬಿಡುಗಡೆ ಮಾಡಿದ್ದು, ಇದೀಗ ಮತ್ತೊಂದು ಹಾಡನ್ನು ನಟ ಯಶ್ ಬಿಡುಗಡೆ ಮಾಡಿದ್ದಾರೆ.

ದೊಡ್ಮನೆ ಹುಡ್ಗ ಚಿತ್ರತಂಡ ಒಂದೊಂದು ಹಾಡನ್ನು ಒಬ್ಬೊಬ್ಬರ ಕೈಯಿಂದ ರಿಲೀಸ್ ಮಾಡಿಸುತ್ತಿದೆ. ಮೊದಲ ಹಾಡನ್ನು ನಡೆದಾಡುವ ದೇವರು ಸಿದ್ದಗಂಗಾ ಮಠದ ಶ್ರೀಗಳಾದ ಶಿವಕುಮಾರ ಸ್ವಾಮೀಜಿಗಳು ಬಿಡುಗಡೆ ಮಾಡಿದ್ದರು. ಮತ್ತೊಂದು ಹಾಡನ್ನು ಸುದೀಪ್ ಬಿಡುಗಡೆ ಮಾಡಿದ್ದರು. ಇದೀಗ ಚಿತ್ರದ ನಾಲ್ಕನೇ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ. ಈ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ.

ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು, ದುನಿಯಾ ಸೂರಿ ಚಿತ್ರ ನಿರ್ದೇಶಿಸಿದ್ದಾರೆ. ಅಜಯ್ ಪಿಕ್ಚರ್ಸ್ ಬ್ಯಾನರ್ ನಡಿ ಎಂ. ಗೋವಿಂದ ಅವರು ಚಿತ್ರ ನಿರ್ಮಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com