ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾರಾ ಜೋಡಿ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ

ಸ್ಯಾಂಡಲ್ವುಡ್ ನ ಸ್ಟಾರ್ ಜೋಡಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಅದ್ಧೂರಿಯಾಗಿ ದಾಂಪತ್ಯ ಜೀವನ ಪ್ರವೇಶಿಸಿದರು.
ಯಶ್, ರಾಧಿಕಾ ಪಂಡಿತ್
ಯಶ್, ರಾಧಿಕಾ ಪಂಡಿತ್
Updated on: 
ಬೆಂಗಳೂರು: ಸ್ಯಾಂಡಲ್ವುಡ್ ನ ಸ್ಟಾರ್ ಜೋಡಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 
ಬೆಂಗಳೂರಿನ ದಿ ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ಕಲಾ ನಿರ್ದೇಶಕ ಅರುಣ್ ಸಾಗರ್ ಅವರು ಭವ್ಯ ವೇದಿಕೆ ಸಿದ್ಧಪಡಿಸಿದ್ದು, ಗಣ್ಯರ ಸಮ್ಮುಖದಲ್ಲಿ ಯಶ್ ರಾಧಿಕಾ ಪಂಡಿತ್ ಅವರ ಕೈಹಿಡಿದರು. 
ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಸೇರಿದಂತೆ ಹಲವು ಗಣ್ಯರು, ಯಶ್ ಮತ್ತು ರಾಧಿಕಾ ಪಂಡಿತ್ ಕುಟುಂಬಸ್ಥರು, ಆಪ್ತರು ಮದುವೆ ಸಮಾರಂಭಕ್ಕೆ ಸಾಕ್ಷಿಯಾದರು. 
ಮೊಗ್ಗಿನ ಮನಸ್ಸು ಚಿತ್ರದ ಮೂಲಕ ಬೆಳ್ಳಿಪರೆದೆಗೆ ಪಾದಾರ್ಪಣೆ ಮಾಡಿದ್ದು ಬಳಿಕ ಡ್ರಾಮಾ ಚಿತ್ರದಲ್ಲಿ ಒಂದಾಗಿದ್ದರು. ಡ್ರಾಮಾ ಚಿತ್ರದ ಯಶಸ್ಸಿನ ಬಳಿಕ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಚಿತ್ರದಲ್ಲಿ ಈ ಜೋಡಿ ಮೋಡಿ ಮಾಡಿತ್ತು. ಕಳೆದ ವರ್ಷ ಬಿಡುಗಡೆಯಾಗಿದ್ದ ಸಂತು ಸ್ಟ್ರೈಟ್ ಫಾರ್ವಡ್ ಚಿತ್ರದ ಈ ಜೋಡಿ ಅಭಿನಯದ ನಾಲ್ಕನೇ ಚಿತ್ರವಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com