

ಬೆಂಗಳೂರು: ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಖಳನಟರಾದ ಅನಿಲ್ ಮತ್ತು ಉದಯ್ ಸಾವು ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರ ನಿರ್ದೇಶಕ ನಾಗಶೇಖರ್ ಮತ್ತು ಸಾಹಸ ನಿರ್ದೇಶಕ ರವಿವರ್ಮಾಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ದುನಿಯಾ ವಿಜಯ್ ನಟನೆಯ ‘ಮಾಸ್ತಿಗುಡಿ’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಮಾಗಡಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ನಡೆಯುತ್ತಿದ್ದ ವೇಳೆ ಖಳ ನಟರಾದ ಅನಿಲ್ ಮತ್ತು ಉದಯ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.
ಹೆಲಿಕಾಪ್ಟರ್ ನಿಂದ ತಿಪ್ಪಗೊಂಡನ ಹಳ್ಳಿ ಕೆರೆಗೆ ಈ ಇಬ್ಬರು ನಟರು ಜಂಪ್ ಮಾಡಿದ್ದರು. ಸರಿಯಾದ ಸಮಯಕ್ಕೆ ದೋಣಿ ತಲುಪು ಕಾರಣ ಈ ಇಬ್ಬರು ಕಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಈಜು ಬಾರದಿದ್ದರೂ ಖಳ ನಟರನ್ನು ಕೆರೆಗೆ ಜಂಪ್ ಮಾಡಿಸಿದ್ದು ಚಿತ್ರ ತಂಡದ ನಿರ್ಲಕ್ಷ್ಯ ಎಂದು ಆರೋಪಿಸಲಾಗಿತ್ತು.
Advertisement