

ಲಾಸ್ ಏಂಜಲೀಸ್: ಪ್ರತಿಷ್ಠಿತ 88ನೇ ಆಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಲಾಸ್ ಏಂಜಲೀಸ್ ನ ಡೊಲ್ಬಿ ಥಿಯೇಟರ್ ನಲ್ಲಿ ಸೋಮವಾರ ಆರಂಭವಾಗಿದ್ದು, ಲಿಯೊನಾರ್ಡ್ ಡಿಕಾಪ್ರಿಯೊ ಅವರು 'ದಿ ರೆವಿನೆನ್ಟ್' ಚಿತ್ರದಲ್ಲಿನ ಉತ್ತಮ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ.
ಹಾಲಿವುಡ್ ನ ಅದ್ದೂರಿ ಸಮಾರಂಭವೆಂದೇ ಹೇಳಲಾಗುವ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಭಾರತೀಯ ಬೆಡಗಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ನಿರೂಪಕಿಯಾಗಿ ಮಿಂಚುತ್ತಿದ್ದಾರೆ. ಪ್ರಶಸ್ತಿ ಸಮಾರಂಭದಲ್ಲಿ 'ಮ್ಯಾಡ್ ಮ್ಯಾಕ್ಸ್ ಫ್ಯೂರಿ ರೋಡ್' ಚಿತ್ರದ ತಂಡ ಸಂತಸದಲ್ಲಿ ಮಿಂದೇಳುತ್ತಿದ್ದು, ಈ ವರೆಗೂ 8 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಮ್ಯಾಡ್ ಮ್ಯಾಕ್ಸ್ ಫ್ಯೂರಿ ಸಿನಿಮಾ ಖ್ಯಾತ ನಿರ್ದೇಶಕ ಜಾರ್ಜ್ ಮಿಲ್ಲರ್ ಅವರು ನಿರ್ದೇಶಿಸಿದ್ದು, ಉತ್ತಮ ಮೇಕಪ್ ಮತ್ತು ಹೇರ್ ಸ್ಟೈಲ್, ಉತ್ತಮ ವಸ್ತ್ರ ವಿನ್ಯಾಸ ಉತ್ತಮ ಪ್ರೊಡಕ್ಷನ್ ಹಾಗೂ ಡಿಸೈನ್ ಸೇರಿ 8 ವಿಭಾಗಗಳಲ್ಲಿ ಪ್ರಶಸ್ತಿಗಳು ಈ ಚಿತ್ರಕ್ಕೆ ದೊರೆತಿದೆ.
ಪ್ರಶಸ್ತಿಗಳ ಪಟ್ಟಿ ಇಂತಿದೆ