
ಚೆನ್ನೈ: ಜಗತ್ತೆ ನಿಬ್ಬೆರಗಾಗಿ ಕಾಯುತ್ತಿದ್ದ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಕಬಾಲಿ ಚಿತ್ರ ಜಗತ್ತಿನಾದ್ಯಂತ ಏಕಕಾಲಕ್ಕೆ ಬಿಡುಗಡೆಯಾಗಿದ್ದು, ಮೊದಲ ದಿನವೇ 65 ಕೋಟಿ ಗಳಿಗೆ ಮಾಡಿದೆ ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ಏಕಕಾಲಕ್ಕೆ ಬಿಡುಗಡೆಯಾಗಿರುವ ಕಬಾಲಿ ಚಿತ್ರ ಭಾರತದಲ್ಲಿ 50 ಕೋಟಿ ಹಾಗೂ ವಿದೇಶದಲ್ಲಿ 15 ಕೋಟಿ ಗಳಿಗೆ ಮಾಡಿದೆ ಎನ್ನುತ್ತಿವೆ ಬಾಕ್ಸ್ ಆಫೀಸ್ ಮೂಲಗಳು.
ಅಮೆರಿಕ, ಬ್ರಿಟನ್, ಮಲೇಷ್ಯಾ, ಸಿಂಗಾಪುರ, ಜಪಾನ್ ಸೇರಿ ಜಗತ್ತಿನ ಹಲವು ಭಾಷೆಗಳಲ್ಲಿ ಸುಮಾರು 5000ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಚಿತ್ರ ತೆರೆಕಂಡಿದೆ.
ಬಹುತೇಕ ಕಡೆ ಮೊದಲ ಮೂರು ದಿನ ಟಿಕೆಟ್ ಮಾರಾಟವಾಗಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಥಿಯೇಟರ್ ಮುಂದೆ ಜಮಾಯಿಸಿದ್ದರು. ಇನ್ನು ತಮಿಳುನಾಡು ಒಂದರಲ್ಲೇ 1000ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಿದ್ದು ಹೊಸ ದಾಖಲೆ ಸೃಷ್ಟಿಸಿದೆ.
Advertisement