ಹಾಸ್ಯ ನಟಿ ಭಾರತಿ ಸಿಂಗ್ ಆಸ್ಪತ್ರೆಯಿಂದ ಬಿಡುಗಡೆ

ತಮ್ಮ ಮಾತನ್ನೇ ಬಂಡವಾಳ ಮಾಡಿಕೊಂಡು ಹಾಸ್ಯದಿಂದ ಪ್ರೇಕ್ಷಕರ ಮನಗೆದಿದ್ದ ಹಾಸ್ಯ ನಟಿ ಭಾರತಿ ಸಿಂಗ್ ಅವರು ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದಾಗಿ...
ಹಾಸ್ಯ ನಟಿ ಭಾರತಿ ಸಿಂಗ್ ಆಸ್ಪತ್ರೆಯಿಂದ ಬಿಡುಗಡೆ
ಹಾಸ್ಯ ನಟಿ ಭಾರತಿ ಸಿಂಗ್ ಆಸ್ಪತ್ರೆಯಿಂದ ಬಿಡುಗಡೆ

ಮುಂಬೈ: ತಮ್ಮ ಮಾತನ್ನೇ ಬಂಡವಾಳ ಮಾಡಿಕೊಂಡು ಹಾಸ್ಯದಿಂದ ಪ್ರೇಕ್ಷಕರ ಮನಗೆದಿದ್ದ ಹಾಸ್ಯ ನಟಿ ಭಾರತಿ ಸಿಂಗ್ ಅವರು ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದಾಗಿ  ತಿಳಿದುಬಂದಿದೆ.

ಭಾರತಿ ಸಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಮುಂಬೈ ನ ಸಂಜೀವಿನಿ ಆಸ್ಪತ್ರೆಗೆ ಮೇ.30 ರಂದು ದಾಖಲು ಮಾಡಲಾಗಿತ್ತು. ಇದೀಗ ಭಾರತಿ ಅವರ ಅರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ಹೇಳಲಾಗುತ್ತಿದೆ. 

ಆಸ್ಪತ್ರೆಗೆ ದಾಖಲಾಗಿರುವ ಕುರಿತಂತೆ ಈ ಹಿಂದೆ ಸ್ವತಃ ಭಾರತಿ ಅವರೇ ಇನ್ಸ್ ಸ್ಟಾಗ್ರಾಮ್ ನಲ್ಲಿ ಹೇಳಿಕೊಂಡಿದ್ದರು. ಶೀಘ್ರಗತಿಯಲ್ಲಿ ಚೇತರಿಕೆಗೊಳ್ಳುವಂತೆ ಹಾರೈಸಿ ಎಂದು ಕೇಳಿಕೊಂಡಿದ್ದರು.

ಭಾರತಿಯವರು ಲಲ್ಲಿ ಪಾತ್ರದ ಮೂಲಕ ಕಿರುತೆರೆಯಲ್ಲಿ ಜನಪ್ರಿಯತೆಯನ್ನು ಗಳಿಸಿದ್ದು, ಇಂಡಿಯಾಸ್ ಗಾಟ್ ಟ್ಯಾಲೆಂಟ್ ಕಾರ್ಯಕ್ರಮದಲ್ಲಿ ತಮ್ಮ ಹಾಸ್ಯದ ಮೂಲಕ ಪ್ರಸಿದ್ಧಿ ಪಡೆದಿದ್ದಾರೆ. ಪ್ರಸ್ತುತ ಭಾರತಿ ಚಿಂಟೂ ಶರ್ಮಾ ಅವರ ಕಾಮಿಡಿ ನೈಟ್ಸ್ ಲೈವ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com