

ಎಸ್.ಎಸ್. ರಾಜಮೌಳಿ ನಿರ್ದೇಶನದ ಬಾಹುಬಲಿ-2 ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ. ಎಸ್.ಎಸ್ ರಾಜಮೌಳಿ ನಿರ್ಮಾಣ ಹಾಗೂ ನಿರ್ದೇಶನದ ಬಾಹುಬಲಿ-2 ಸಿನಿಮಾವು 2017, ಏಪ್ರಿಲ್ 14 ರಂದು ಬಿಡುಗಡೆಯಾಗಲಿದೆ. ಮುಂದಿನ ವರ್ಷ 2017 ಏಪ್ರಿಲ್ ರಂದು ರಿಲೀಸ್ ಆಗಲಿದೆ ಎಂದು ಪ್ರಭಾಸ್ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ.
ಈಗಾಗ್ಲೇ ಚಿತ್ರ ರಸಿಕರ ಮನ ಗೆಲ್ಲುವಲ್ಲಿ ಬಾಹುಬಲಿ ಚಿತ್ರ ಯಶಸ್ವಿಯಾಗಿತ್ತು. ಮತ್ತೆ ಬಾಹುಬಲಿ -2 ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಅಂತ ಕಾಯುತ್ತಿದ್ದ ಅಭಿಮಾನಿಗಳಿಗೆ ಕಡೆಗೂ ಚಿತ್ರದ ಟೀಮ್ ದಿನಾಂಕ ನಿಗದಿಯಾಗಿದೆ. ಇನ್ನೂ ಚಿತ್ರದಲ್ಲಿ ನಟ ರಾಣಾ, ಪ್ರಭಾಸ್, ತಮನ್ನಾ ಹಾಗೂ ಅನುಷ್ಕಾ ಶೆಟ್ಟಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ವರ್ಷದ ಕೊನೆಯ ವಾರದಲ್ಲಿ ಚಿತ್ರದ ಶೂಟಿಂಗ್ ಮುಕ್ತಾಯಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಜುಲೈ 10 2015 ರಲ್ಲಿ ಬಿಡುಗಡೆಯಾದ ಬಾಹುಬಲಿ ಚಿತ್ರ ಅಭೂತ ಪೂರ್ವ ಯಶಸ್ಸು ಪಡೆದಿತ್ತು. ತಮಿಳು, ತೆಲುಗು, ಮಲಯಾಳಂ, ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾದ ಈ ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು.