

ಬೆಂಗಳೂರು: ಕರ್ನಾಟಕ ತೆಲುಗು ಅಕಾಡೆಮಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮ್‌ರಾವ್ ಅವರ 94ನೇ ಜನ್ಮ ದಿನಾಚರಣೆ ಅಂಗವಾಗಿ ರೆಬಲ್‌ಸ್ಟಾರ್ ಅಂಬರೀಶ್ ಹಾಗೂ ಸುಮಲತಾ ಅವರಿಗೆ 2016ನೇ ಡಾ.ಎನ್‌ಟಿಆರ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಎನ್ ಟಿ ಆರ್ ಹುಟ್ಟುಹಬ್ಬವಾದ ನಾಳೆ ಸಂಜೆ 6.30ಕ್ಕೆ ರವೀಂದ್ರಾಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು ಅಂಬರೀಷ್ ದಂಪತಿಯನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಆರ್.ವಿ.ಹರೀಶ್ ತಿಳಿಸಿದ್ದಾರೆ.
ಟಿಟಿಡಿ ಟ್ರಸ್ಟ್ ಬೋರ್ಡ್ ಸಂಸ್ಥಾಪಕ ಅಧ್ಯಕ್ಷ ಡಾ.ಎ.ರಾಧಾಕೃಷ್ಣರಾಜು ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಚಿವ ರಾಮಲಿಂಗಾರೆಡ್ಡಿ, ಆಂಧ್ರಪ್ರದೇಶದ ಮಾಜಿ ಸಚಿವೆ ಡಿ.ಪುರಂದರೇಶ್ವರಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.