

ಬೆಂಗಳೂರು: ಕನ್ನಡ ಸಿನಿಮಾ ರಂಗದಲ್ಲಿ ಸದಾ ಹೊಸತನಕ್ಕೆ ಹಾತೊರೆಯುವ ನಟ ರಕ್ಷಿತ್ ಶೆಟ್ಟಿ ತಮ್ಮ ಮುಂದಿನ ಚಿತ್ರ ಕಿರಿಕ್ ಪಾರ್ಟಿ ಸಿನಿಮಾ ಹಾಡುಗಳನ್ನು ಆನ್ ಲೈನ್ ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.
ಯಾವುದೇ ಕ್ಯಾಸೆಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಳ್ಳದೇ ಕಿರಿಕ್ ಪಾರ್ಟಿ ಸಿನಿಮಾ ಹಾಡುಗಳನ್ನು ಆನ್ ಲೈನ್ ನಲ್ಲಿ ಬಿಡುಗಡೆ ಮಾಡುವುದಾಗಿ ನಟ, ನಿರ್ಮಾಪಕ ಹಾಗೂ ನಿರ್ದೆಶಕ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.
ಇದುವರೆಗೂ ನಮ್ಮದು ಸ್ವಂತ ಪ್ರೊಡಕ್ಷನ್ ಹೌಸ್ ಇತ್ತು, ಸಿನಿಮಾ ನಿರ್ಮಾಣದ ಎಲ್ಲಾ ವಲಯಗಳಿಗೂ ವಿಸ್ತರಿಸಬೇಕಾಗಿದೆ. ನಾವು ಯೂ ಟ್ಯೂಬ್ ಚಾನೆಲ್ ಆರಂಭಿಸಲು ನಿರ್ಧರಿಸಿದ್ದೇವೆ. ಅದರ ಮೊದಲ ಹಂತವಾಗಿ ಸಿನಿಮಾ ಟ್ರೇಲರ್ ರನ್ನು ಬಿಡುಗಡೆ ಮಾಡಿದ್ದವು. ಇದಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು, ಹೀಗಾಗಿ ಆನ್ ಲೈನ್ ನಲ್ಲಿ ಆಡಿಯೋ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಪ್ರಸಕ್ತ ಪರಿಸ್ಥಿತಿಯಲ್ಲಿ ಆಡಿಯೋ ಬಿಡುಗಡೆಗೆ ಉತ್ತಮವಾದ ಮಾರುಕಟ್ಟೆಯಿಲ್ಲ, ಹೀಗಾಗಿ ಕಿರಿಕ್ ಪಾರ್ಟಿ ಸಿನಿಮಾ ಹಾಡುಗಳನ್ನು ಆಲ್ ಲೈನ್ ನಲ್ಲಿ ಬಿಡುಗಡೆ ಮಾಡುವ ಪ್ರಯೋಗ ಮಾಡುತ್ತಿದ್ದೇವೆ. ಪರಮಾವ್ ಸ್ಟುಡಿಯೋದಲ್ಲಿ ಆಡಿಯೋ ಬಿಡುಗಡೆ ನಡೆಯಲಿದೆ.
ಸಿನಿಮಾದಲ್ಲಿ 10 ಹಾಡುಗಳಿವೆ. ಹಾಡುಗಳಿಗೆ ಬಿ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.ರಕ್ಷಿತ್ ಶೆಟ್ಟಿ ಸಾಹಿತ್ಯ ಮತ್ತು ನೃತ್ಯ ನಿರ್ದೇಶನ ಮಾಡಿದ್ದಾರೆ.