ಮುಂಗಾರುಮಳೆ ಖ್ಯಾತಿಯ ಗಣೇಶ್ ಮತ್ತು ಯೋಗರಾಜ್ ಭಟ್ ಜೋಡಿಯ ಮುಂದಿನ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ.
ಚಿತ್ರಕ್ಕೆ ಮುಗುಳುನಗೆ ಎಂದು ಶೀರ್ಷಿಕೆ ಇಡಲಾಗಿದ್ದು ಮುಂದಿನ ವಾರ ಚಿತ್ರೀಕರಣ ಶುರು ಮಾಡಲಿದೆಯಂತೆ. ಯೋಗರಾಜ್ ಭಟ್ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ.
ಗೋಲ್ಡನ್ ಮೂವೀಸ್, ಯೋಗರಾಜ್ ಮೂವೀಸ್ ಮತ್ತು ಎಸ್.ಎಸ್ ಫಿಲ್ಮ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ.