ಬಾಹುಬಲಿ
ಬಾಹುಬಲಿ

ಮೇಡಂ ಟ್ಯುಸಾಡ್ಸ್ ನಲ್ಲಿ ಪ್ರಭಾಸ್ 'ಬಾಹುಬಲಿ' ಮೇಣದ ಪ್ರತಿಮೆ ನಿರ್ಮಾಣ

ಭಾರತದಲ್ಲಿ ಸಂಚಲನ ಸೃಷ್ಠಿಸಿದ್ದ ಪ್ರಭಾಸ್ ಅಭಿನಯದ ಬಾಹುಬಲಿ ಚಿತ್ರಕ್ಕೆ ಮತ್ತೊಂದು ಗರಿಮೆ. ಬ್ಯಾಂಕಾಕ್ ನ ಪ್ರತಿಷ್ಠಿತ ಮೇಡಂ ಟ್ಯುಸಾಡ್ಸ್ ಮ್ಯೂಸಿಯಂನಲ್ಲಿ ಬಾಹುಬಲಿ ಪಾತ್ರಧಾರಿ...

ಭಾರತದಲ್ಲಿ ಸಂಚಲನ ಸೃಷ್ಠಿಸಿದ್ದ ಪ್ರಭಾಸ್ ಅಭಿನಯದ ಬಾಹುಬಲಿ ಚಿತ್ರಕ್ಕೆ ಮತ್ತೊಂದು ಗರಿಮೆ. ಬ್ಯಾಂಕಾಕ್ ನ ಪ್ರತಿಷ್ಠಿತ ಮೇಡಂ ಟ್ಯುಸಾಡ್ಸ್ ಮ್ಯೂಸಿಯಂನಲ್ಲಿ ಬಾಹುಬಲಿ ಪಾತ್ರಧಾರಿ ಪ್ರಭಾಸ್ ಅವರ ಮೇಣದ ಪ್ರತಿಮೆಯನ್ನು ನಿರ್ಮಿಸಲು ನಿರ್ಧರಿಸಲಾಗಿದೆ.

ಈ ಮ್ಯೂಸಿಯಂನಲ್ಲಿ ಸ್ಥಾನ ಪಡೆದ ದಕ್ಷಿಣ ಭಾರತದ ಮೊದಲ ನಟ ಎಂಬ ಖ್ಯಾತಿಗೆ ಪ್ರಭಾಸ್ ಪಾತ್ರರಾಗಿದ್ದಾರೆ. ಈ ಬಗ್ಗೆ ಬಾಹುಬಲಿ ಚಿತ್ರ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

2017ರ ಮಾರ್ಚ್ ನಲ್ಲಿ ಪ್ರಭಾಸ್ ಅವರ ಮೇಣದ ಪ್ರತಿಮೆ ಅನಾವರಣಗೊಳ್ಳಲಿದೆ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com