ಕನ್ನಡ ಚಿತ್ರರಂಗದ ಹಿತಾಸಕ್ತಿ ಕಾಪಾಡಲು ನಾನು ಬದ್ಧ: ಎಚ್.ಡಿ ಕುಮಾರಸ್ವಾಮಿ

ಕನ್ನಡ ಚಿತ್ರರಂಗದ ಹಿತಾಸಕ್ತಿ ಕಾಪಾಡಲು ನಾನು ಸದಾ ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ...
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕನ್ನಡ ಚಿತ್ರರಂಗದ ಹಿತಾಸಕ್ತಿ ಕಾಪಾಡಲು ನಾನು ಸದಾ ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. 
ಕನ್ನಡ ಚಲನಚಿತ್ರರಂಗದ ಸಮಸ್ಯೆಗಳು ಎಂಬ ವಿಷಯ ಕುರಿತಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮಾತನಾಡಿದ ಅವರು, ಕನ್ನಡ ಚಿತ್ರರಂಗದಲ್ಲಿನ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ಹೋರಾಟದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಬೆಂಬಲಕ್ಕೆ ನಿಲುತ್ತೇನೆ. ಕರ್ನಾಟಕದಲ್ಲಿ ಬೇರೆ ಭಾಷಾ ಚಿತ್ರಗಳು ಪ್ರದರ್ಶನಗೊಳ್ಳಲು ಯಾವುದೇ ನಿರ್ಬಂಧ ಇಲ್ಲ. ಆದರೆ ಇತರ ರಾಜ್ಯಗಳಲ್ಲಿ ನಮ್ಮ ಚಿತ್ರಗಳಿಗೆ ಇದೇ ರೀತಿ ಆತಿಥ್ಯ ಇಲ್ಲ. ಆದ್ಧರಿಂದ ಪರಭಾಷಾ ಚಿತ್ರಗಳ ಪ್ರದರ್ಶನವನ್ನು ಮಿತಗೊಳಿಸಲೇಬೇಕು ಎಂದು ಆಗ್ರಹಿಸಿದ್ದಾರೆ. 
ಕೆಲವು ಥಿಯೇಟರ್ ಗಳಲ್ಲಿ ನಿರಂತರವಾಗಿ ಪರಭಾಷಾ ಚಿತ್ರಗಳನ್ನೇ ಪ್ರದರ್ಶಿಸಲಾಗುತ್ತಿದೆ. ಇನ್ನು ಕೆಲವು ಕಡೆಗಳಲ್ಲಿ ಚಿತ್ರಮಂದಿರಗಳ ಮಾಲೀಕರು ವಿಪರೀತ ಬಾಡಿಗೆ ಕೇಳುತ್ತಾರೆ. ಇವನೆಲ್ಲಾ ಕೊನೆಗಾಣಿಸಬೇಕಿದೆ. ಇದರಿಂದ ನಿರ್ಮಾಪಕ ಸಮಸ್ಯೆಗಳು ಬಗೆಹರಿಯುತ್ತವೆ ಎಂದರು. 
ಸದ್ಯ ಥಿಯೇಟರ್ ಗಳಿಗಿಂತ ಮಲ್ಟಿಪ್ಲೆಕ್ಸ್ ಗಳು ಕನ್ನಡ ಚಿತ್ರಗಳನ್ನು ಕಡೆಗಣಿಸುತ್ತೀವೆ. ಹಿಂದಿ, ತೆಲುಗು, ಇಂಗ್ಲಿಷ್, ತಮಿಳು ಚಿತ್ರಗಳಿಗೆ ಹೆಚ್ಚು ಮನ್ನಣೆ ನೀಡುತ್ತೀವೆ. ಇದರಿಂದಾಗಿ ಹೆಚ್ಚಾಗಿ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ಚಿತ್ರಗಳು ತೆರೆಕಾಣುತ್ತಿಲ್ಲ. ಈ ನಿಟ್ಟಿನಲ್ಲಿ ಕನ್ನಡ ಚಿತ್ರಗಳನ್ನು ಉಳಿಸಲು ಒಂದು ಸಮಗ್ರ ನೀತಿಯನ್ನು ರೂಪಿಸುವ ಅನಿವಾರ್ಯತೆ ಇದೆ ಎಂದರು. 
ನಟರು ರಿಯಾಲಿಟಿ ಷೋಗಳಲ್ಲಿ ಪಾಲ್ಗೊಳ್ಳುವುದು ಸರಿಯಲ್ಲ
ಕಿರುತೆರೆ ರಿಯಾಲಿಟಿ ಷೋಗಳಲ್ಲಿ ಸಿನಿಮಾ ನಟರು ಭಾಗವಹಿಸುವುದು ಸರಿಯಲ್ಲ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಈ ಹೋರಾಟದಲ್ಲಿ ನಾನು ನಿರ್ಮಾಪಕರನ್ನು ಬೆಂಬಲಿಸುತ್ತೇನೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com