ಪಾಕಿಸ್ತಾನ ಕಲಾವಿದರು ಭಯೋತ್ಪಾದಕರಲ್ಲ: ನಟ ಸಲ್ಮಾನ್ ಖಾನ್

ಪಾಕಿಸ್ತಾನ ಕಲಾವಿದರನ್ನು ಭಯೋತ್ಪಾದಕರಂತೆ ನೋಡಬಾರದು. ಕಲೆ ಹಾಗೂ ಭಯೋತ್ಪಾದನೆಯನ್ನು ಒಂದೇ ದೃಷ್ಟಿಯಲ್ಲಿ ನೋಡಬಾರದು ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು...
ಬಾಲಿವುಡ್ ನಟ ಸಲ್ಮಾನ್ ಖಾನ್ (ಸಂಗ್ರಹ ಚಿತ್ರ)
ಬಾಲಿವುಡ್ ನಟ ಸಲ್ಮಾನ್ ಖಾನ್ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಪಾಕಿಸ್ತಾನ ಕಲಾವಿದರನ್ನು ಭಯೋತ್ಪಾದಕರಂತೆ ನೋಡಬಾರದು. ಕಲೆ ಹಾಗೂ ಭಯೋತ್ಪಾದನೆಯನ್ನು ಒಂದೇ ದೃಷ್ಟಿಯಲ್ಲಿ ನೋಡಬಾರದು ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಶುಕ್ರವಾರ ಹೇಳಿದ್ದಾರೆ.

ಉರಿ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಡುವಂತೆ ಮಾಡಿದ್ದು, ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ಕಲಾವಿದರು ಕೂಡಲೇ ಭಾರತವನ್ನು ತೊರೆಯುವಂತೆ (ಎಂಎನ್ ಎಸ್) ಮಹಾರಾಷ್ಟ್ರ ನವನಿರ್ಮಾಣ ಸೇನೆ ಕರೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘ ಕೂಡ ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ನಟ ಸಲ್ಮಾನ್ ಖಾನ್ ಅವರು, ಪಾಕಿಸ್ತಾನ ಕಲಾವಿದರು ಕೇವಲ ಕಲಾವಿದರಷ್ಟೇ ಅವರೇನು ಭಯೋತ್ಪಾದಕರಲ್ಲ. ಭಯೋತ್ಪಾದನೆ ಹಾಗೂ ಕಲೆ ಎರಡಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ ಎಂದು ಹೇಳಿದ್ದಾರೆ.

ಭಾರತೀಯ ಸೇನೆ ಭಯೋತ್ಪಾದನೆ ವಿರುದ್ಧ ಕಾರ್ಯಾಚರಣೆ ನಡೆಸಿದೆ. ಎರಡೂ ದೇಶಗಳಲ್ಲೂ ಸಾಮರಸ್ಯ ಹಾಗೂ ಶಾಂತಿ ನೆಲೆಸಲಿ ಎಂದು ಆಶಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com