ಶನಿವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಸೆಟ್ ತುಂಬಾ ವ್ಯಾಪಿಸಿಕೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆ ಕಲಾವಿದರು, ತಂತ್ರಜ್ಞರು ಸೆಟ್‌ನಿಂದ ಹೊರ ಬಂದಿದ್ದಾರೆ. ಸೆಟ್ ಸಂಪೂರ್ಣ ಭಸ್ಮ ವಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ತಹಬಂದಿಗೆ ತಂದಿದ್ದಾರೆ.