ಮುಂಬೈ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಗಾಯಕ ಯಶ್ ವಾಡಾಲಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
39 ವರ್ಷದ ಮಹಿಳೆಯೊಬ್ಬರು ಗಾಯಕ ಯಶ್ ವಾಡಾಲಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಈ ಬಗ್ಗೆ ಬನಗೂರ್ ನಗರ ಪೊಲೀಸ್ ಠಾಣೆಯಲ್ಲಿ ಯಶ್ ವಿರುದ್ಧ ಮಹಿಳೆ ಬುಧವಾರ ದೂರು ನೀಡಿದ್ದಾರೆ. ಗೋರೆಗಾಂವ್ ವೆಸ್ಟ್ ನಿವಾಸದಲ್ಲಿ ಗಾಯಕ ಯಶ್ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗುರುವಾರ ರಾತ್ರಿ ಯಶ್‌ರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ದಿನ್‌ದೋಶಿ ಸೆಷನ್ ಕೋರ್ಟ್‌ಗೆ ಅವರನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ಇನ್ನು, ಮಹಿಳೆಯ ದೂರಿನ್ವಯ ಯಶ್ ವಿರುದ್ಧ ಐಪಿಸಿ ಸೆಕ್ಷನ್ 354 ಹಾಗೂ 504ರಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.