ವಾಲ್ಮೀಕಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನಟಿ ರಾಖಿ ಸಾವಂತ್'ಗೆ ನಿರೀಕ್ಷಣಾ ಜಾಮೀನು

ವಾಲ್ಮೀಕಿ ಮಹರ್ಷಿಯವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಾಖಿ ಸಾವಂತ್ ಅವರಿಗೆ ಶನಿವಾರ ನಿರೀಕ್ಷಣಾ ಜಾಮೀನು ದೊರೆತಿದೆ...
ಬಾಲಿವುಡ್ ನಟಿ ರಾಖಿ ಸಾವಂತ್
ಬಾಲಿವುಡ್ ನಟಿ ರಾಖಿ ಸಾವಂತ್
Updated on
ಲುಧಿಯಾನ: ವಾಲ್ಮೀಕಿ ಮಹರ್ಷಿಯವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಾಖಿ ಸಾವಂತ್ ಅವರಿಗೆ ಶನಿವಾರ ನಿರೀಕ್ಷಣಾ ಜಾಮೀನು ದೊರೆತಿದೆ. 
ಪ್ರಕರಣ ಸಂಬಂಧ ನಿನ್ನೆ ವಿಚಾರಣೆ ನಡೆಸಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಘ್ ಗುರುರ್ಬಿರ್ ಸಿಂಗ್ ಅವರು, ರಾಖಿಯವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದು, ಆಗಸ್ಟ್ 7 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. 
ಜುಲೈ.6 ರಂದು ನಿರೀಕ್ಷಣಾ ಜಾಮೀನು ನೀಡಿದ್ದ ನ್ಯಾಯಾಧೀಶ ವಿಶಾವ್ ಗುಪ್ತಾ ಅವರು, ಜು.7 ರಂದು ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದ್ದರು. ಆದೇಶ ನೀಡಿದ್ದರು ರಾಖಿ ವಿಚಾರಣೆಗೆ ಹಾಜರಾಗಿರಲಿಲ್ಲ .
ಕಳೆದ ವರ್ಷ ಖಾಸಗಿ ವಾಹನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಖಿ ಸಾವಂತ್ ಅವರು, ವಾಲ್ಮೀಕಿ ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ ಹೇಳಿಕೆಯನ್ನು ನೀಡಿದ್ದರು ಎಂದು ದೂರು ದಾಖಲಾಗಿತ್ತು. 
ಆ ದೂರನ್ನು ಆಧರಿಸಿ ಮಾರ್ಚ್ 9 ರಂದು ನ್ಯಾಯಾಲಯ ರಾಖಿ ಸಾವಂತ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com