ರಕ್ಷಿತ್ ಶೆಟ್ಟಿ ಅಭಿನಯದ ರಿಭಶ್ ಶೆಟ್ಟಿ ನಿರ್ದೇಶನದ ಕಿರಿಕ್ ಪಾರ್ಟಿ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.
ಕಳೆದ ವರ್ಷ ಬಿಡುಗಡೆಯಾಗಿದ್ದ ಚಿತ್ರ ಇಲ್ಲಿಯವರೆಗೂ 40 ಕೋಟಿ ಗಳಿಸಿದ್ದು ಇನ್ನು ಮುಂದಿನ ದಿನಗಳಲ್ಲಿ 50 ಕೋಟಿ ರುಪಾಯಿ ದಾಟಲಿದೆ ಎಂಬ ಭರವಸೆಯನ್ನು ಚಿತ್ರದ ನಿರ್ಮಾಪಕರು ವ್ಯಕ್ತಪಡಿಸಿದ್ದಾರೆ. ಇನ್ನು ಚಿತ್ರದ ಸ್ಯಾಟಲೈಟ್ ಹಕ್ಕಗಳು ಮಾರಾಟವಾಗಿಲ್ಲ ಎನ್ನುವುದು ಮತ್ತೊಂದು ವಿಶೇಷ.
ಕಿರಿಕ್ ಪಾರ್ಟಿ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಹಾಗೂ ಸಂಯುಕ್ತಾ ಹೆಗ್ಡೆ ಅಭಿನಯಿಸಿದ್ದಾರೆ.