ನಟಿ ಭಾವನಾಗೆ ಲೈಂಗಿಕ ಕಿರುಕುಳ: ಪ್ರಕರಣದ ಮಾಸ್ಟರ್ ಮೈಂಡ್ ಸೇರಿದಂತೆ ಮತ್ತಿಬ್ಬರ ಬಂಧನ

ದಕ್ಷಿಣ ಭಾರತದ ಪ್ರಸಿದ್ದ ನಟಿ ಭಾವನಾ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು...
ಭಾವನಾ
ಭಾವನಾ
Updated on: 
ಕೊಚ್ಚಿ: ದಕ್ಷಿಣ ಭಾರತದ ಪ್ರಸಿದ್ದ ನಟಿ ಭಾವನಾ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನಟಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಕೊಚ್ಚಿ ಪೊಲೀಸರು 7 ಮಂದಿಯ ಪೈಕಿ ಇದುವರೆಗೂ ಮೂವರನ್ನು ಬಂಧಿಸಿದ್ದಾರೆ
ಭಾವನಾ ಅವರ ಮಾಜಿ ಕಾರು ಚಾಲಕ ಮಾರ್ಟಿನ್ ನನ್ನು ಶನಿವಾರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಶುಕ್ರವಾರ ರಾತ್ರಿ 7.30 ರ ಸುಮಾರಿಗೆ ತ್ರಿಶೂರ್​ನಿಂದ ಎರ್ನಾರಕುಳಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಭಾವನಾ ಅವರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ನಂತರ ರಾತ್ರಿ ಪರಿವಟ್ಟಲಂ ಎಂಬಲ್ಲಿ ಭಾವನಾ ಅವರನ್ನು ಕಾರಿನಲ್ಲೇ ಬಿಟ್ಟು ಪರಾರಿಯಾಗಿದ್ದರು.
ನಂತರ ಭಾವನಾ ನಿರ್ದೇಶಕರೊಬ್ಬ ಮನೆಗೆ ತೆರಳಿ ಅಲ್ಲಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com