ನಟಿ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗಳನ್ನು ಕೊಯಿಮತ್ತೂರಿಗೆ ಕರೆದೊಯ್ದ ಅಧಿಕಾರಿಗಳು

ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಪತ್ತಗಾಗಿ ಆರೋಪಿಗಳನ್ನು ಅಧಿಕಾರಿಗಳು ಕೊಯಿಮತ್ತೂರಿಗೆ ಕರೆದೊಯ್ದಿದ್ದಾರೆಂದು ಭಾನುವಾರ...
ತನಿಖೆಯಲ್ಲಿ ತೊಡಗಿರುವ ಪೊಲೀಸರು
ತನಿಖೆಯಲ್ಲಿ ತೊಡಗಿರುವ ಪೊಲೀಸರು
Updated on
ಕೊಚ್ಚಿ: ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಪತ್ತಗಾಗಿ ಆರೋಪಿಗಳನ್ನು ಅಧಿಕಾರಿಗಳು ಕೊಯಿಮತ್ತೂರಿಗೆ ಕರೆದೊಯ್ದಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಕೆಲ ದಿನಗಳ ಹಿಂದಷ್ಟೇ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಾದ ಪಲ್ಸರ್ ಸುನಿ ಮತ್ತು ವಿ.ಪಿ. ವಿಘ್ನೇಶ್ ನನ್ನು 9 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿತ್ತು. ಇದರಂತೆ ಆರೋಪಿಗಳ ಕಸ್ಟಡಿ ಮಾರ್ಚ್ 5 ರ ಬಳಿಕ ಅಂತ್ಯಗೊಳ್ಳಲಿದೆ. 
ದ್ವೇಷ ಹಾಗೂ ಇನ್ನಿತರೆ ಆಯಾಮಗಳಲ್ಲಿ ಪ್ರಕರಣವನ್ನು ತನಿಖೆ ನಡೆಸಲಾಗುತ್ತಿದೆ. ಘಟನೆ ವೇಳೆ ಆರೋಪಿಗಳು ಬಳಸಲಾಗಿರುವ ಮೊಬೈಲ್ ಫೋನ್, ಫೋಟೋಗಳು, ಸಿಮ್ ಕಾರ್ಡ್ ಹಾಗೂ ಇನ್ನಿತರೆ ವಸ್ತುಗಳು ಪ್ರಮುಖ ಸಾಕ್ಷ್ಯಗಳಾಗಿದ್ದು, ಅವುಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಫೆ.17ರ ರಾತ್ರಿ 7.30 ರ ಸುಮಾರಿಗೆ ತ್ರಿಶೂರ್​ನಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ನಂತರ ರಾತ್ರಿ ಪರಿವಟ್ಟಲಂ ಎಂಬಲ್ಲಿ ನಟಿಯನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ನಂತರ ನಟಿ ನಿರ್ದೇಶಕರೊಬ್ಬರ ಮನೆಗೆ ತೆರಳಿ ಅಲ್ಲಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಸುನಿಲ್ ಸೇರಿದಂತೆ ಇನ್ನಿತರೆ ಆರೋಪಿಗಳ ವಿರುದ್ಧ ಕೇರಳ ಪೊಲೀಸರು ಐಪಿಸಿ ಸೆಕ್ಸನ್ 342 (ಅಕ್ರಮ ಬಂಧನ), 366 (ಅಪಹರಣ ಅಥವಾ ಮಹಿಳೆಯ ಅಪಹರಣ), 376 (ಅತ್ಯಾಚಾರ, 506 (1) ಮತ್ತು 120 (ಬಿ) (ವಂಚನೆ)) ಅಡಿ ಕೇಸ್ ದಾಖಲಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com