ನಾವು ಉತ್ತಮವಾದುದನ್ನು ನೀಡಲು, ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ: ಎ.ಆರ್.ರೆಹಮಾನ್

ಲಂಡನ್ ನಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟ ನಂತರ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ...
ಎ.ಆರ್.ರೆಹಮಾನ್
ಎ.ಆರ್.ರೆಹಮಾನ್
ನ್ಯೂಯಾರ್ಕ್: ಲಂಡನ್ ನಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟ ನಂತರ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿರುದ್ಧ ಮಾಡಿರುವ ಟ್ರೋಲ್ ಗೆ ಆಸ್ಕರ್ ವಿಜೇತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ವಿಚಲಿತರಾಗಿಲ್ಲ. ಲಂಡನ್ ಕಾರ್ಯಕ್ರಮದ ವೇಳೆ ತಮಿಳಿನ ಹೆಚ್ಚು ಗೀತೆಗಳನ್ನು ಹಾಡಿದ್ದರೆಂದು ಕೆಲವರು ಕಾರ್ಯಕ್ರಮದ ಮಧ್ಯದಲ್ಲಿಯೇ ಬಿಟ್ಟು ಹೋದರು.
ಇಷ್ಟು ವರ್ಷಗಳ ಕಾಲ ಜನರು ನನ್ನನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ಅವರಿಲ್ಲದೆ ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ. ಅದಕ್ಕೆ ನಾನು ಎಲ್ಲರಿಗೂ ಚಿರಋಣಿಯಾಗಿದ್ದೇನೆ ಎಂದು ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಹೇಳಿದರು.
ಮೊನ್ನೆ 8ರಂದು ರೆಹಮಾನ್ ಲಂಡನ್ ನ ವೆಂಬ್ಲಿ ಕ್ರೀಡಾಂಗಣದಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಅದರಲ್ಲಿ ಅವರು ಹಿಂದಿಗಿಂತ ಹೆಚ್ಚು ತಮಿಳು ಹಾಡುಗಳನ್ನು ಹಾಡಿದ್ದಾರೆ ಎಂದು ಅವರ ಕೆಲವು ಅಭಿಮಾನಿಗಳು ಆರೋಪಿಸಿದ್ದರು.
ಇದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ಟ್ರೋಲ್ ಮಾಡಿದ ಬಗ್ಗೆ ವಿಚಾರಿಸಿದಾಗ, ನಾವು ನಮ್ಮ ಕೈಲಾದ ಪ್ರಯತ್ನ ಮಾಡಿದ್ದೇವೆ. ನಾವು ಸಾಧ್ಯವಾದಷ್ಟು ಪ್ರಾಮಾಣಿಕವಾಗಿ ದುಡಿಯಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.
ಲಂಡನ್ ನ ಸಂಗೀತ ಕಾರ್ಯಕ್ರಮಕ್ಕೆ ವ್ಯತಿರಿಕ್ತವಾಗಿ ನ್ಯೂಯಾರ್ಕ್ ನ ಮೆಟ್ ಲೈಫ್ ಸ್ಟೇಡಿಯಂನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಕ್ರಮ ನಡೆಸಿಕೊಟ್ಟರು. ಜನರು ಇನ್ನೂ  ಬೇಕೆಂದು ಕೇಳಿದರು. ಅವರು ತಮಿಳಿನ ಊರ್ವಶಿ, ಊರ್ವಶಿ ಹಾಡು ಹಾಡಿದಾಗ ಮತ್ತೊಮ್ಮೆ ಹಾಡಿ ಎಂ ದು ಅಭಿಮಾನಿಗಳು ದುಂಬಾಲು ಬಿದ್ದರು.
ನಿನ್ನೆ ನಡೆದ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ರೆಹಮಾನ್ ಅವರಿಗೆ ಸಂಗೀತ ಕ್ಷೇತ್ರದಲ್ಲಿ 25 ವರ್ಷಗಳ ಕಾಲ ಮಾಡಿದ ಸಾಧನೆಗೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com