ಸಂಗ್ರಹ ಚಿತ್ರ
ಸಿನಿಮಾ ಸುದ್ದಿ
ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಖ್ಯಾತ ರಿಯಾಲಿಟಿ ಶೋ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮುಂದಿನ ಶನಿವಾರದ ಸಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಖ್ಯಾತ ರಿಯಾಲಿಟಿ ಶೋ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮುಂದಿನ ಶನಿವಾರದ ಸಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಧಕರ ಕುರ್ಚಿಯಲ್ಲಿ ಕುಳಿತುಕೊಳ್ಳಲಿದ್ದಾರೆ.
ಜೂನ್ 22 ರಂದು ಇಪಿಸೋಡ್ ನ ಚಿತ್ರೀಕರಣ ನಡೆಯಲಿದ್ದು, ಜೂ.24 ರಂದು ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರ ಬಾಲ್ಯದ ಗೆಳೆಯರು ಯಾರು? ಅವರದು ಪ್ರೇಮ ವಿವಾಹವೇ? ಅವರು ಶಾಲೆಗೆ ಹೋಗುತ್ತಿದ್ದ ದಿನಗಳು ಹೇಗಿದ್ದವು? ಅವರ ಊರಿನ ಮನೆ ಹೇಗಿತ್ತು? ಸಿದ್ದರಾಮಯ್ಯ ಅವರ ಗೆಳೆಯರು ಅವರನ್ನು ಏನೆಂದು ಕರೆಯುತ್ತಾರೆ? ಹೀಗೆ ಸಿಎಂ ಕುರಿತ ನಾನಾ ರೀತಿಯ ಕುತೂಹಲಭರಿತ ಪ್ರಶ್ನೆಗಳಿಗೆ ವೀಕೆಂಟಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಉತ್ತರ ಸಿಗಲಿದೆ.
ಇತ್ತೀಚೆಗಷ್ಟೇ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರೂ ಕೂಡ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

