ಪ್ರೇಮ ವೈಫಲ್ಯ: ನಟ ಹುಚ್ಚಾ ವೆಂಕಟ್ ಆತ್ಮಹತ್ಯೆಗೆ ಯತ್ನ

ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದರು ಎಂದು ಆರೋಪಿಸಿರುವ ಬಿಗ್ ಬಾಸ್ ಖ್ಯಾತಿಯ ನಟ ಹುಚ್ಚಾ ವೆಂಕಟ್ ಅವರು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ...
ಬಿಗ್ ಬಾಸ್ ಖ್ಯಾತಿಯ ನಟ ಹುಚ್ಚಾ ವೆಂಕಟ್
ಬಿಗ್ ಬಾಸ್ ಖ್ಯಾತಿಯ ನಟ ಹುಚ್ಚಾ ವೆಂಕಟ್
Updated on: 

ಬೆಂಗಳೂರು: ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದರು ಎಂದು ಆರೋಪಿಸಿರುವ ಬಿಗ್ ಬಾಸ್ ಖ್ಯಾತಿಯ ನಟ ಹುಚ್ಚಾ ವೆಂಕಟ್ ಅವರು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ. 

ಪ್ರೀತಿಯಲ್ಲಿ ತಮಗೆ ಮೋಸವಾಗಿದೆ, ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸುತ್ತಿದ್ದಾಳೆ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಸ್ನೇಹಿತರು ಹಾಗೂ ಪರಿಚಯಸ್ಥರಿಗೆ ಸಂದೇಶ ರವಾನಿಸಿ ವೆಂಕಟ್ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಪ್ರಕರಣಗಳೂ ದಾಖಲಾಗಿಲ್ಲ. 

ಪ್ರಸ್ತುತ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿರುವ ವೆಂಕಟ್ ಅವರು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಾಯದಿಂದ ಪಾರಾಗಿದ್ದಾರೆಂದು ಮೂಲಗಳು ತಿಳಿಸಿವೆ.

ವೆಂಕಟ್ ಅವರು ತಮ್ಮ ಸ್ನೇಹಿತರಿಗೆ ಕಳುಹಿಸಿರುವ ಸಂದೇಶದಿಂದ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಬೆಳಕಿದೆ ಬಂದಿದೆ. ಕೂಡಲೇ ಕುಟುಂಬಸ್ಥರು ವೆಂಕಟ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಯಶವಂತಪುರ ಪೊಲೀಸರು ವೆಂಟಕ್ ಅವರ ಮನೆಗೆ ಹೋಗಿ ಪರಿಶೀಲನೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. 

ಈ ಹಿಂದೆ ಬಿಗ್ ಬಾಸ್ ವಿನ್ನರ್ ಆಗಿದ್ದ ಪ್ರಥಮ್ ಅವರೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು.
ಆ ಸಂದರ್ಭದಲ್ಲಿ ಇದೇ ಹುಚ್ಚ ವೆಂಕಟ್ ಅವರು ಪ್ರಥಮ್ ಅವರಿದೆ ಬುದ್ಧಿವಾದ ಹೇಳಿದ್ದರು. ಇದೀಗ ಇದೇ ಹುಚ್ಛ ವೆಂಕಟ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸುದ್ದಿಯಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com