

ಮುಂಬಯಿ: ನಟಿ ಐಶ್ವರ್ಯ ರೈ ಅವರ ತಂದೆ ಕೃಷ್ಣರಾಜ್ ರೈ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಮುಂಬಯಿಯ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿರುವ ಕೃಷ್ಣರಾಜ್ ರೈ ಕಳೆದ ಎರಡು ವಾರಗಳಿಂದ ತೀವ್ರ ಅಸ್ವಸ್ಥರಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟಿ ಐಶ್ವರ್ಯಾ ರೈ ಹಾಗೂ ಆಕೆಯ ಪತಿ ಅಭಿಷೇಕ್ ಬಚ್ಚನ್ ಲೀಲಾವತಿ ಆಸ್ಪತ್ರೆಗೆ ತೆರಳಿ ಕೃಷ್ಣರಾಜ್ ರೈ ಅವರ ಆರೋಗ್ಯ ವಿಚಾರಿಸಿದ್ದಾರೆ.
ನಿನ್ನೆಯಷ್ಟೇ ಐಶ್ವರ್ಯ ಹಾಗೂ ಅಭಿಷೇಕ್ ಬಚ್ಚನ್ ಆಸ್ಪತ್ರೆಗೆ ತೆರಳುವ ಫೋಟೋವೊಂದು ವೈರಲ್ ಆಗಿತ್ತು. ಆ ಫೋಟೋ ಬಹಳಷ್ಟು ಜನರಲ್ಲಿ ಕುತೂಹಲ ಸೃಷ್ಟಿಸಿತ್ತು. ಈ ದಂಪತಿ ಏಕೆ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಮೂಡಿದ್ದ ಪ್ರಶ್ನೆಗೆ ಉತ್ತರ ಸಿಕ್ಕಿದೆ.