ಡಬ್ಬಿಂಗ್ ಚಿತ್ರಗಳು ಚಿತ್ರರಂಗಕ್ಕೆ ಮಾರಕ, ನಾನು ಡಬ್ಬಿಂಗ್ ವಿರೋಧಿಸುತ್ತೇನೆ: ನಟ ದರ್ಶನ್

ಕನ್ನಡ ಚಿತ್ರರಂಗವನ್ನು ಉಳಿಸಿ ಬೆಳೆಸ ಬೇಕಿದ್ದು ಡಬ್ಬಿಂಗ್ ಚಿತ್ರಗಳು ನಮ್ಮ ಚಿತ್ರರಂಗಕ್ಕೆ ಮಾರಕ. ಹೀಗಾಗಿ ಡಬ್ಬಿಂಗ್ ಚಿತ್ರವನ್ನು ನಾನು ವಿರೋಧಿಸುತ್ತೇನೆ ಎಂದು ನಟ ದರ್ಶನ್ ಹೇಳಿದ್ದಾರೆ...
ದರ್ಶನ್
ದರ್ಶನ್
Updated on
ಬೆಂಗಳೂರು: ಕನ್ನಡ ಚಿತ್ರರಂಗವನ್ನು ಉಳಿಸಿ ಬೆಳೆಸ ಬೇಕಿದ್ದು ಡಬ್ಬಿಂಗ್ ಚಿತ್ರಗಳು ನಮ್ಮ ಚಿತ್ರರಂಗಕ್ಕೆ ಮಾರಕ. ಹೀಗಾಗಿ ಡಬ್ಬಿಂಗ್ ಚಿತ್ರವನ್ನು ನಾನು ವಿರೋಧಿಸುತ್ತೇನೆ ಎಂದು ನಟ ದರ್ಶನ್ ಹೇಳಿದ್ದಾರೆ. 
ಪರಭಾಷಾ ಚಿತ್ರಗಳ ಡಬ್ಬಿಂಗ್ ವಿರೋಧಿಸಿ ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಿಂದ ಫ್ರೀಡಂಪಾರ್ಕ್ ವರೆಗೆ ಬೃಹತ್ ಪ್ರತಿಭಟನೆ ನಡೆದಿದ್ದು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ದರ್ಶನ್ ಡಬ್ಬಿಂಗ್ ಅನ್ನು ವಿರೋಧಿಸಿದ್ದಾರೆ. 
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಡಬ್ಬಿಂಗ್ ಚಿತ್ರಗಳು ರಾಜ್ಯದಲ್ಲಿ ಪ್ರದರ್ಶನವಾಗಬಾರದು. ಡಬ್ಬಿಂಗ್ ಚಿತ್ರ ಬಂದರೆ ಕನ್ನಡ ಚಿತ್ರೋದ್ಯಮವನ್ನೇ ನಂಬಿಕೊಂಡಿರುವ ಸಾವಿರಾರು ಜನರು ಸಮಸ್ಯೆ ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ನಾಡಿನ ಚಿತ್ರಮಂದಿರಗಳು ಡಬ್ಬಿಂಗ್ ಚಲನಚಿತ್ರ ಪ್ರದರ್ಶನಕ್ಕೆ ಮುಂದಾಗಬಾರದು ಎಂದು ಹೇಳಿದರು. 
ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದು ಡಬ್ಬಿಂಗ್ ಬೇಡ ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com