ಕೇಂದ್ರ ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್: ಶೇ.2 ರಷ್ಟು ತುಟ್ಟಿ ಭತ್ಯೆ ಏರಿಕೆ

ಈ ವರ್ಷದ ಜನವರಿ 1 ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ. ರಷ್ಟು ತುಟ್ಟಿ ಭತ್ಯೆ ಏರಿಸಿ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ:  ಈ ವರ್ಷದ ಜನವರಿ 1 ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ. ರಷ್ಟು ತುಟ್ಟಿ ಭತ್ಯೆ ಏರಿಸಿ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ. .
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಶೇ. 2 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. 2017 ರ ಜನವರಿ 1 ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. 
ಇದರಿಂದ 48.85 ಲಕ್ಷ ಸರ್ಕಾರಿ ನೌಕರರು ಮತ್ತು 55.51 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.  ಇದರಿಂದ ಕೇಂದ್ರ ಸರ್ಕಾರಕ್ಕೆ 5,833 ಕೋಟಿ ರು ಹೊರೆಯಾಗಲಿದ್ದು, ಪ್ರತಿವರ್ಷ 6, 833.50 ಕೋಟಿ. ವೆಚ್ಚ ವಾಗಲಿದೆ. ಈ ಹಿಂದೆ ಕೇಂದ್ರ ಸರ್ಕಾರ 2016ರ ಜುಲೈ 1 ರಿಂದ ತುಟ್ಟಿ ಭತ್ಯೆ ಶೇ. 2 ರಷ್ಟು ಹೆಚ್ಚಿಸಿತ್ತು. ಈ ವರ್ಷ ಸಹ ಅಷ್ಟೇ ಪ್ರಮಾಣದಲ್ಲಿ ಏರಿಕೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com