ರಜನಿಕಾಂತ್ ಮುಂದಿನ ಸಿನಿಮಾಗೆ ದೀಪಿಕಾ ಪಡುಕೋಣೆ ನಾಯಕಿಯಲ್ಲ

: ಸೂಪರ್ ಸ್ಟಾರ್ ರಜನೀಕಾಂತ್ ಅವರ ಮುಂದಿನ ಚಿತ್ರದಲ್ಲಿ ಗುಳಿಕೆನ್ನೆ ಬೆಡಗಿ ದೀಪಿಕಾ ಪಡುಕೋಣೆ ನಟಿಸಲಿದ್ದಾರೆ ಎಂಬ ಊಹಾಪೋಹಾಗಳಿಗೆ ನಿರ್ದೇಶಕ ಪಾ.ರಂಜಿತ್ ...
ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಅವರ ಮುಂದಿನ ಚಿತ್ರದಲ್ಲಿ ಗುಳಿಕೆನ್ನೆ ಬೆಡಗಿ ದೀಪಿಕಾ ಪಡುಕೋಣೆ ನಟಿಸಲಿದ್ದಾರೆ ಎಂಬ ಊಹಾಪೋಹಾಗಳಿಗೆ ನಿರ್ದೇಶಕ ಪಾ.ರಂಜಿತ್ ತೆರೆ ಎಳೆದಿದ್ದಾರೆ.

ಇನ್ನೂ ಹೆಸರಿಡದ ರಜನಿಕಾಂತ್ ಅಭಿನಯದ ತಮಿಳು ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿಲ್ಲ ಎಂದು ನಿರ್ದೇಶಕ ಹೇಳಿದ್ದಾರೆ.

ಈ ಸಂಬಂಧ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪಾ. ರಂಜಿತ್  ತಮ್ಮ ಮುಂದಿನ ಪ್ರಾಜೆಕ್ಟ್ ನಲ್ಲಿ ದೀಪಿಕಾ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.ಇದಕ್ಕೂ ಮೊದಲು ರಾಧಿಕಾ ಆಪ್ಟೆ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂದು ಸುದ್ದಿ ಹರಿದಾಡಿತ್ತು.

ಕಬಾಲಿ ನಂತರ ರಜನಿಕಾಂತ್ ಮತ್ತು ರಂಜಿತ್ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ವರ್ಷದ ಮಧ್ಯಭಾಗದಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com