ತೆಲುಗಿನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿಯ ನಿರ್ದೇಶನದ ಬಾಹುಬಲಿ 2 ಚಿತ್ರ ಬಿಡುಗಡೆಗೆ ಮುನ್ನ 500 ಕೋಟಿ ಗಳಿಗೆ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದು ಇದೀಗ ಮತ್ತೊಂದು ದಾಖಲೆ ಬರೆಯಲು ಮುಂದಾಗಿದೆ.
ಪ್ರಭಾಸ್ ಅಭಿನಯದ ಬಾಹುಬಲಿ 2 ಚಿತ್ರ ದೇಶಾದ್ಯಂತ ಬರೋಬ್ಬರಿ 6500 ಸ್ಕ್ರೀನ್ ಗಳಲ್ಲಿ ಚಿತ್ರ ತೆರೆ ಕಾಣುವ ಮೂಲಕ ಅತೀ ಹೆಚ್ಚು ಸ್ಕ್ರೀನ್ ಗಳಲ್ಲಿ ತೆರೆ ಕಾಣುತ್ತಿರುವ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಗೆಗೆ ಪಾತ್ರವಾಗಿದೆ.
ಬಾಹುಬಲಿ ಮೊದಲ ಭಾಗ ದೇಶಾದ್ಯಂತ 4000 ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಿತ್ತು. ಇದೀಗ ಬಾಹುಬಲಿ 2 ಚಿತ್ರ ಭಾರತೀಯ ಚಿತ್ರರಂಗದಲ್ಲಿ ಬಹುನಿರೀಕ್ಷಿತ ಚಿತ್ರವಾಗಿದ್ದು ಈ ಹಿನ್ನೆಲೆಯಲ್ಲಿ ಬರೋಬ್ಬರಿ 2500 ಸ್ಕ್ರೀನ್ ಗಳನ್ನು ಹೆಚ್ಚಿಸಿಕೊಳ್ಳುವ ಮೂಲಕ 6500 ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗುತ್ತಿದೆ.
ಬಾಹುಬಲಿ ಚಿತ್ರದಲ್ಲಿ ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾ, ರಮ್ಯಕೃಷ್ಣ ಸೇರಿದಂತೆ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರ ಏಪ್ರಿಲ್ 28 ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.