ನ. 24ರಂದು ಅಂಜನಿಪುತ್ರ ಆಡಿಯೋ ರಿಲೀಸ್, ಪುನೀತ್ ಫ್ಯಾನ್ಸ್ ಗೆ ಸಿಗಲಿದೆ ಮತ್ತೊಂದು ಸರ್ ಪ್ರೈಸ್!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಷ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ ಅಂಜನಿಪುತ್ರ ಚಿತ್ರದ ಆಡಿಯೋ ಇದೇ ನವೆಂಬರ್ 24ರಂದು ಬಿಡುಗಡೆಯಾಗುತ್ತಿದ್ದು, ಪಿಆರ್ ಕೆ ಆಡಿಯೋ ಬ್ಯಾನರ್ ನಡಿಯಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಆಡಿಯೋ ಇದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಷ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ ಅಂಜನಿಪುತ್ರ ಚಿತ್ರದ ಆಡಿಯೋ ಇದೇ ನವೆಂಬರ್ 24ರಂದು ಬಿಡುಗಡೆಯಾಗುತ್ತಿದ್ದು, ಪಿಆರ್ ಕೆ ಆಡಿಯೋ  ಬ್ಯಾನರ್ ನಡಿಯಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಆಡಿಯೋ ಇದಾಗಿದೆ.
ನಾಳೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರು ತಮ್ಮ ಅಭಿನಯದ ಚಿತ್ರದ ಆಡಿಯೋವನ್ನು ಬಿಡುಗಡೆ ಮಾಡಲಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು  ಅವರು ಸಂಗೀತ ನೀಡಿದ್ದು, ಇದೇ ಕಾರ್ಯಕ್ರಮದಲ್ಲಿ ಚಿತ್ರದ ಮೊದಲ ಟ್ರೇಲರ್ ಕೂಡ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಚಿತ್ರದ ನಿರ್ದೇಶ ಹರ್ಷ ಗೌಪ್ಯ ಕಾಯ್ದುಕೊಂಡಿದ್ದಾರೆ. 
ನಾಳೆ ಆಡಿಯೋ ಬಿಡುಗಡೆಯಾದ ಬಳಿಕ ಪುನೀತ್ ಅಭಿಮಾನಿಗಳಿಗೆ ಸರ್ ಪ್ರೈಸ್ ಉಡುಗೊರೆಯಾಗಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಹರ್ಷ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ನಿರ್ದೇಶಕ ಹರ್ಷ  ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ನಾಳೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಪುನೀತ್ ಅಭಿಮಾನಿಗಳಿಗೆ ಡಬಲ್ ಟ್ರೀಟ್ ದೊರೆಯುವ ಸಾಧ್ಯತೆ ಇದೆ.
ಪ್ರಸ್ತುತ ಅಂಜನಿ ಪುತ್ರ ಚಿತ್ರದ ಡಬ್ಬಿಂಗ್ ಕಾರ್ಯ ನಡೆಯುತ್ತಿದ್ದು. ಚಿತ್ರದಲ್ಲಿ ನಟಿ ರಮ್ಯ ಕೃಷ್ಣ, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಪ್ರಮುಖ ನಟರು ಅಭಿನಯಿಸಿದ್ದಾರೆ. ಇನ್ನು ನಟಿ ಹರಿಪ್ರಿಯ ಅವರು ಒಂದು ವಿಶೇಷ ಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com